ಗದಗ: ನಗರಸಭೆ ಉಪಾಧ್ಯಕ್ಷೆ ಪುತ್ರ ಸೇರಿದಂತೆ ಒಂದೇ ಕುಟುಂಬದ ನಾಲ್ವರ ಕೊಲೆ

ಗದಗ: ಬೆಟಗೇರಿ ನಗರಗರಸಭೆ ಉಪಾಧ್ಯಕ್ಷೆಯ ಪುತ್ರ ಸೇರಿದಂತೆ ಒಂದೇ ಕುಟುಂಬದ ನಾಲ್ವರನ್ನು ದುಷ್ಕರ್ಮಿಗಳು ಭೀಕರವಾಗಿ ಕೊಲೆ ಮಾಡಿದ್ದಾರೆ.

ದಾಸರ ಓಣಿಯಲ್ಲಿ ನಿವಾಸದಲ್ಲಿ ಘಟನೆ ನಡೆದಿದ್ದು, ಮಲಗಿದ್ದಲ್ಲಿಯೇ ಕೊಲೆ ಮಾಡಲಾಗಿದೆ. ಸುನಂದಾ ಬಾಕಳೆ ಅವರ ಪುತ್ರ ಕಾರ್ತಿಕ್ ಬಾಕಳೆ (27), ಪರಶುರಾಮ (55), ಆತನ ಪತ್ನಿ ಲಕ್ಷ್ಮೀ (45), ಪುತ್ರಿ ಆಕಾಂಕ್ಷಾ (16) ಕೊಲೆಗೀಡಾದವರು.

ಎಪ್ರಿಲ್ 17 ರಂದು ಪ್ರಕಾಶ್ ಬಾಕಳೆ ಪುತ್ರ ಕಾರ್ತಿಕನ ಮದುವೆ ಫಿಕ್ಸ್ ಮಾಡುವ ಕಾರ್ಯಕ್ರಮಕ್ಕೆ ಕೊಪ್ಪಳದಿಂದ ಸಂಬಂಧಿಗಳು ಆಗಮಿಸಿದ್ದರು. ಮನೆಯ ಮೊದಲ ಮಹಡಿಯ ಕೋಣೆಯಲ್ಲಿ ಮಲಗಿದ್ದಲ್ಲೆ ಹತ್ಯೆ ಮಾಡಲಾಗಿದ್ದು, ತೀವ್ರ ರಕ್ತಸ್ರಾವದಿಂದ ನಾಲ್ವರು ಸ್ಥಳದಲ್ಲಿಯೇ ಮೃತಪಟ್ಟಿದ್ದಾರೆ.

ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.