ಧರ್ಮಸ್ಥಳ : ಕಾರು ಹಾಗೂ ಜೀಪ್ ಮಧ್ಯೆ ಅಪಘಾತ; ನಾಲ್ವರಿಗೆ ಗಂಭೀರ ಗಾಯ

ಧರ್ಮಸ್ಥಳ: ಕಾರು ಹಾಗೂ ಜೀಪ್ ನಡುವೆ ಅಪಘಾತ ಸಂಭವಿಸಿದ ಪರಿಣಾಮ ನಾಲ್ವರು ಗಂಭೀರ ಗಾಯಗೊಂಡ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಸುಬ್ರಹ್ಮಣ್ಯ – ಧರ್ಮಸ್ಥಳ ರಾಜ್ಯ ಹೆದ್ದಾರಿಯ ಬಿಳಿನೆಲೆ ಎಂಬಲ್ಲಿ ಇಂದು ಬೆಳಿಗ್ಗೆ ನಡೆದಿದೆ.

ಸುಬ್ರಹ್ಮಣ್ಯದಿಂದ ಕಡಬ ಕಡೆಗೆ ಹೋಗುತ್ತಿದ್ದ ಜೀಪ್ ಹಾಗೂ ಸುಬ್ರಹ್ಮಣ್ಯ ಕಡೆಗೆ ತೆರಳುತ್ತಿದ್ದ ಕಾರು ಬಿಳಿನೆಲೆ ಸೇತುವೆಯ ಸಮೀಪ ಮುಖಾಮುಖಿ ಡಿಕ್ಕಿಯಾಗಿದೆ. ಅಪಘಾತದಲ್ಲಿ ಜೀಪಿ‌ನಲ್ಲಿದ್ದ ಇಬ್ಬರು ಹಾಗೂ ಕಾರಿನಲ್ಲಿದ್ದ ಇಬ್ಬರಿಗೆ ಗಂಭೀರ ಗಾಯಗಳಾಗಿದ್ದು, ಗಾಯಾಳುಗಳನ್ನು ಆಸ್ಪತ್ರೆಗೆ ಕರೆದೊಯ್ಯಲಾಗಿದೆ.