ಸೆ. 26 ರಿಂದ ಅ. 25 ರ ವರೆಗೆ 4 ನೇ ಸುತ್ತಿನ ಕಾಲುಬಾಯಿ ಲಸಿಕಾ ಕಾರ್ಯಕ್ರಮ

ಉಡುಪಿ: ಕಾಲು ಬಾಯಿ ರೋಗವು ಜಾನುವಾರುಗಳಿಗೆ ಮಾರಣಾಂತಿಕ ಕಾಯಿಲೆಯಾಗಿದ್ದು, ಈ ರೋಗ ನಿಯಂತ್ರಣಕ್ಕಾಗಿ ರಾಷ್ಟ್ರೀಯ ಜಾನುವಾರು ರೋಗಗಳ ನಿಯಂತ್ರಣ ಕಾರ್ಯಕ್ರಮದಡಿ 4 ನೇ ಸುತ್ತಿನ ಕಾಲುಬಾಯಿ ಲಸಿಕಾ ಕಾರ್ಯಕ್ರಮವನ್ನು ಸೆಪ್ಟಂಬರ್ 26 ರಿಂದ ಅಕ್ಟೋಬರ್ 25 ರ ವರೆಗೆ ಜಿಲ್ಲಾದ್ಯಂತ ಹಮ್ಮಿಕೊಳ್ಳಲಾಗುತ್ತಿದ್ದು ಜಾನುವಾರು ಮಾಲೀಕರು ಇದರ ಪ್ರಯೋಜನವನ್ನು ಪಡೆದುಕೊಳ್ಳುವಂತೆ ಜಿಲ್ಲಾಡಳಿತ ತಿಳಿಸಿದೆ.