ಕುಂದಾಪುರ: ಮಹಿಳೆಯೊಬ್ಬರಿಂದ ಹಣ ಪಡೆದು ವಂಚಿಸಿದ ಆರೋಪದಡಿ ಕುಂದಾಪುರದ ಮಾಜಿ ಪುರಸಭಾ ಸದಸ್ಯ, ಕಾಂಗ್ರೆಸ್ ಮುಖಂಡ ಸಂದೀಪ ಪೂಜಾರಿ ಕೋಡಿ (34) ಎಂಬಾತನನ್ನು ಪೊಲೀಸರು ಇಂದು ಬಂಧಿಸಿದ್ದಾರೆ.
ಸಂದೀಪ್ ಪೂಜಾರಿ ಪರಿಶಿಷ್ಟ ಪಂಗಡಕ್ಕೆ ಸೇರಿದ ಮಹಿಳೆಯೊಬ್ಬರಿಗೆ ಅಂಚೆ ಇಲಾಖೆಯಲ್ಲಿ ಕೆಲಸ ಕೊಡಿಸುತ್ತೇನೆ. ನಿನ್ನನ್ನು ಮದುವೆಯಾಗುತ್ತೇನೆಂದು ನಂಬಿಸಿ ಹಣ ಪಡೆದಿದ್ದನು. ಆದರೆ ಈಗ ಆತ ಕೆಲಸವನ್ನು ಕೊಡಿಸಲಿಲ್ಲ. ಹಣವನ್ನು ಹಿಂತಿರುಗಿಸಲಿಲ್ಲ. ಕೇಳಿದರೆ ಬೈದು ಜಾತಿ ನಿಂದನೆ ಮಾಡಿದ್ದಾನೆ ಎಂದು ಮಹಿಳೆ ಆರೋಪಿಸಿದ್ದಾರೆ. ಮಹಿಳೆ ನೀಡಿದ ದೂರಿನಂತೆ ಕುಂದಾಪುರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.