ಭಾರತೀಯ ರೆಡ್ ಕ್ರಾಸ್ ಸೊಸೈಟಿಗೆ ವಂಚನೆ: ಚೇಯರ್‌ಮೆನ್ ವಿರುದ್ಧ ಕೇಸ್ ದಾಖಲು

ಉಡುಪಿ: ಭಾರತೀಯ ರೆಡ್‌ಕ್ರಾಸ್ ಸೊಸೈಟಿಗೆ ವಂಚನೆ ಮಾಡಿರುವ ಆರೋಪದಡಿ ರೆಡ್‌ಕ್ರಾಸ್ ಸೊಸೈಟಿ ಉಡುಪಿ ಜಿಲ್ಲೆಯ ಚೇಯರ್‌ಮೆನ್ ಬಸ್ರೂರು ರಾಜೀವ ಶೆಟ್ಟಿ ವಿರುದ್ಧ ಉಡುಪಿ ನಗರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.

ರಾಜೀವ ಶೆಟ್ಟಿ 2020ರ ಜ.6ರಂದು ಕಾನೂನು ಬಾಹಿರವಾಗಿ ಭಾರತೀಯ ರೆಡ್‌ಕ್ರಾಸ್ ಸೊಸೈಟಿ ಚಾರಿಟೇಬಲ್ ಟ್ರಸ್ಟ್  ಸ್ಥಾಪಿಸಿದ್ದು, ಅದಕ್ಕೆ ಭಾರತೀಯ ರೆಡ್‌ಕ್ರಾಸ್ ಸೊಸೈಟಿಯ ಚಿಹ್ನೆ ಮತ್ತು ಟ್ರೇಡ್ ಮಾರ್ಕ್ ಉಪಯೋಗಿಸಿಕೊಂಡು ಸಾರ್ವಜನಿಕರಿಂದ ಕಾನೂನು ಬಾಹಿರವಾಗಿ ದೇಣಿಗೆ ಪಡೆದಿದ್ದಾರೆ ಎಂದು ದೂರಿನಲ್ಲಿ ಉಲ್ಲೇಖಿಸಲಾಗಿದೆ.

ಈ ಟ್ರಸ್ಟನ್ನು ಉಡುಪಿಯ ಉಪನೋಂದಣಾಧಿಕಾರಿಯವರ ಕಚೇರಿಯಲ್ಲಿ ನೋಂದಾಯಿಸಿ ಭಾರತೀಯ ರೆಡ್ ಕ್ರಾಸ್ ಸೊಸೈಟಿಗೆ ವಂಚನೆ ಮಾಡಿದ್ದಾರೆಂದು ಭಾರತೀಯ ರೆಡ್‌ಕ್ರಾಸ್ ಸಂಸ್ಥೆ ಬೆಂಗಳೂರು ಇದರ ಚೇಯರ್‌ಮೆನ್ ಎಸ್.ನಾಗಣ್ಣ ನೀಡಿದ ದೂರಿನಂತೆ ಪ್ರಕರಣ ದಾಖಲಾಗಿದೆ.