ಮಣಿಪಾಲ: ಕುತ್ತಿಗೆ ನೋವು, ಕುತ್ತಿಗೆಯ ಬಿಗಿತ ಹಾಗೂ ಕುತ್ತಿಗೆಯ ಚಲನೆಗೆ ತೊಂದರೆ ಅನುಭವಿಸುತ್ತಿರುವವರಿಗಾಗಿ ಮುನಿಯಾಲು ಆಯುರ್ವೇದ ಕಾಲೇಜು ಮತ್ತು ಆಸ್ಪತ್ರೆಯ ಕಾಯಚಿಕಿತ್ಸಾ ಸ್ನಾತಕೋತ್ತರ ವಿಭಾಗದ ವತಿಯಿಂದ ಆಗಸ್ಟ್10ರಿಂದ 15ರವರೆಗೆ ಪ್ರತಿದಿನ ಬೆಳಗ್ಗೆ 9ರಿಂದ ಸಂಜೆ 4.30ರವರೆಗೆ ಮಣಿಪಾಲದ ಶಿವಳ್ಳಿ ಕೈಗಾರಿಕಾ ಪ್ರದೇಶದಲ್ಲಿರುವ ಮುನಿಯಲ್ ಆಯುರ್ವೇದ ಆಸ್ಪತ್ರೆ ಮತ್ತು ಸಂಶೋಧನಾ ಸಂಸ್ಥೆಯಲ್ಲಿ ಉಚಿತ ತಪಾಸಣೆ ಮತ್ತು ಸಲಹಾ ಶಿಬಿರ ನಡೆಯಲಿದೆ.
ಶಿಬಿರದಲ್ಲಿ ಕುತ್ತಿಗೆ ನೋವು ಹಾಗೂ ಸರ್ವೈಕಲ್ ಸ್ಪಾಂಡಿಲೋಸಿಸ್ (Cervical Spondylosis)) ಸಮಸ್ಯೆಗಳಿಗೆ ವಿಶೇಷ ಆಯುರ್ವೇದ ತಪಾಸಣೆ, ವೈದ್ಯಕೀಯ ಸಲಹೆ ಹಾಗೂ ಅಗತ್ಯ ಚಿಕಿತ್ಸಾ ಹಾಗೂ ಮಾರ್ಗದರ್ಶನ ನೀಡಲಾಗುವುದು.
ಕುತ್ತಿಗೆಯ ನೋವು, ಬಿಗಿತ, ಕುತ್ತಿಗೆ ಚಲಿಸುವಲ್ಲಿ ತೊಂದರೆ ಸೇರಿದಂತೆ ಸಂಬಂಧಿತ ಸಮಸ್ಯೆಗಳಿಂದ ಬಳಲುತ್ತಿರುವವರು ಶಿಬಿರದ ಸದುಪಯೋಗ ಪಡೆದುಕೊಳ್ಳಬಹುದು.
ಅಗತ್ಯವಿರುವವರಿಗೆ ಪಂಚಕರ್ಮ ಚಿಕಿತ್ಸೆಯ ಮೂಲಕ ಕುತ್ತಿಗೆ ನೋವಿಗೆ ಚಿಕಿತ್ಸೆ ಹಾಗೂ ಔಷಧೋಪಚಾರವನ್ನು ರಿಯಾಯಿತಿ ದರದಲ್ಲಿ ಒದಗಿಸಲಾಗುವುದು ಎಂದು ಸಂಸ್ಥೆ ತಿಳಿಸಿದೆ. ಹೆಚ್ಚಿನ ಮಾಹಿತಿ ಹಾಗೂ ನೋಂದಣಿಗಾಗಿ 8123403233 ಸಂಪರ್ಕಿಸಬಹುದು.















