ಮೈಸೂರು: ಕಟ್ಟಡ ಕಾರ್ಮಿಕರಿಗೆ ಉಚಿತ ಬಸ್ ಪಾಸ್ ನೀಡಲಾಗುವುದು ಎಂದು ಕೆಎಸ್ಆರ್ಟಿಸಿ ಅಧ್ಯಕ್ಷ ಎಂ.ಚಂದ್ರಪ್ಪ ಹೇಳಿದರು.
ಮೈಸೂರಿನಲ್ಲಿ ಸೋಮವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಾರ್ಮಿಕರಿಗೆ ತಮ್ಮ ಕೆಲಸದ ನಿಮಿತ್ತ ರಾಜ್ಯದ ವಿವಿಧೆಡೆ ಸಂಚರಿಸಲು ಅನುಕೂಲವಾಗುವಂತೆ ಕೆಎಸ್ಆರ್ಟಿಸಿ ನಿಗಮದಿಂದ ಪಾಸ್ ವಿತರಣೆ ಮಾಡಲಾಗುವುದು ಎಂದರು.
ಮೈಸೂರು ಜಿಲ್ಲೆಯಲ್ಲಿನ 60,600 ಕಟ್ಟಡ ಕಾರ್ಮಿಕರಿಗೆ ಪ್ರಾಯೋಗಿಕವಾಗಿ ಈ ಯೋಜನೆ ಅನುಷ್ಠಾನಗೊಳಿಸಲಾಗುತ್ತದೆ. ನಂತರದ ದಿನಗಳಲ್ಲಿ ಎಲ್ಲ ಜಿಲ್ಲೆಗಳಿಗೂ ವಿಸ್ತರಿಸಲಾಗುವುದು ಎಂದು ಚಂದ್ರಪ್ಪ ತಿಳಿಸಿದರು.