ಜೂ.15 – 20 ರವರೆಗೆ ಮುನಿಯಾಲು ಆಯುರ್ವೇದ ಕಾಲೇಜು ಮತ್ತು ಆಸ್ಪತ್ರೆಯ ವತಿಯಿಂದ ಉಚಿತ ತಪಾಸಣೆ ಶಿಬಿರ.

ಮಣಿಪಾಲ: ಮಣಿಪಾಲದ ಶಿವಳ್ಳಿ ಇಂಡಸ್ಟ್ರಿಯಲ್ ಏರಿಯಾದಲ್ಲಿರುವ ಮುನಿಯಾಲು ಆಯುರ್ವೇದ ಕಾಲೇಜು ಮತ್ತು ಆಸ್ಪತ್ರೆಯ ವತಿಯಿಂದ ದಿನಾಂಕ ಜೂ.15 ರಿಂದ ಜೂ.20 ರವರೆಗೆ ಬೆಳಿಗ್ಗೆ 9 ಗಂಟೆಯಿಂದ ಸಂಜೆ 4.30 ಗಂಟೆಯವರೆಗೆ ಬಿಳಿ ತೊನ್ನು (ವಿಟಿಲಿಗೋ) ಮತ್ತು ಇತರ ಚರ್ಮ ಸಂಬಂಧ ರೋಗಗಳ ಉಚಿತ ತಪಾಸಣೆ ಹಾಗು ಸಲಹಾಶಿಬಿರವನ್ನು ಮತ್ತು ರಿಯಾಯಿತಿ ದರದಲ್ಲಿ ಚಿಕಿತ್ಸಾ ಶಿಬಿರವನ್ನು ಸಂಸ್ಥೆಯ ಆಸ್ಪತ್ರೆಯಲ್ಲಿ ಆಯೋಜಿಸಲಾಗಿದೆ.

ಚರ್ಮದ ಮೇಲೆ ಬಿಳಿ ಮಚ್ಚೆ ಅಥವಾ ಬಿಳಿ ಕಲೆ ಇರುವ ಸರ‍್ವಜನಿಕರು ಇದರ ಸದುಪಯೋಗವನ್ನು ಪಡೆದುಕೊಳ್ಳಲು ಕೋರಲಾಗಿದೆ.

ಶಿಬಿರದ ಕುರಿತು ಹೆಚ್ಚಿನ ಮಾಹಿತಿಗಾಗಿ 8123403233 ಅನ್ನು ಸಂಪರ್ಕಿಸಬಹುದು.