ಎಸ್.ಡಿ.ಎಂ ಆಯುರ್ವೇದ ಆಸ್ಪತ್ರೆ ವತಿಯಿಂದ ಗರ್ಭಾಶಯ ಹಾಗೂ ಸ್ತನ ಕ್ಯಾನ್ಸರ್ ಉಚಿತ ತಪಾಸಣಾ ಶಿಬಿರ

ಕುತ್ಪಾಡಿ: ಇಲ್ಲಿನ ಎಸ್.ಡಿ.ಎಂ ಆಯುರ್ವೇದ ಕಾಲೇಜು ಮತ್ತು ಆಸ್ಪತ್ರೆ ವತಿಯಿಂದ ಮಹಿಳೆಯರ ಗರ್ಭಾಶಯ ಕೊರಳಿನ ಕ್ಯಾನ್ಸರ್ ಮತ್ತು ಸ್ತನ ಕ್ಯಾನ್ಸರ್ ಉಚಿತ ತಪಾಸಣಾ ಮತ್ತು ಮಾಹಿತಿ ಶಿಬಿರವನ್ನು ಆಸ್ಪತ್ರೆಯ ಆವರಣದಲ್ಲಿ ಫೆ.1 ರಿಂದ 7 ರವರೆಗೆ ಬೆಳಗ್ಗೆ 9 ರಿಂದ ಸಂಜೆ 5 ರವರೆಗೆ ಹಮ್ಮಿಕೊಳ್ಳಲಾಗಿದ್ದು, ಆಸ್ಪತ್ರೆಯ ಪ್ರಸೂತಿ ತಂತ್ರ ಹಾಗೂ ಸ್ತ್ರೀರೋಗ ವಿಭಾಗದ ತಜ್ಞರು ಭಾಗವಹಿಸಲಿದ್ದಾರೆ.

ತಜ್ಞ ವೈದರು ಗರ್ಭಾಶಯ ಕೊರಳಿನ ಕ್ಯಾನ್ಸರ್ ಮತ್ತು ಸ್ತನ ಕ್ಯಾನ್ಸರ್ ನ ಬಗ್ಗೆ ಮಾಹಿತಿಯನ್ನು ನೀಡಲಿದ್ದಾರೆ. ಮಹಿಳೆಯರು ಇದರ ಸದುಪಯೋಗ ಪಡೆಸಿಕೊಳ್ಳಬೇಕು ಎಂದು ಆಸ್ಪತ್ರೆಯ ಪ್ರಕಟಣೆ ತಿಳಿಸಿದೆ.

ಹೆಚ್ಚಿನ ಮಾಹಿತಿಗಾಗಿ ಸಂಪರ್ಕಿಸಿ: 0820-2533301/2533302,2533303