ಉಡುಪಿ: ಉಚಿತ ಕಂಪ್ಯೂಟರ್ ತರಬೇತಿ- ನೊಂದಣಿಗೆ ಸೂಚನೆ

ಉಡುಪಿ : ಕೈಗಾರಿಕಾ ತರಬೇತಿ ಮತ್ತು ಉದ್ಯೋಗ ಇಲಾಖೆ, ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರ ಉಡುಪಿ, ಇಲ್ಲಿ ಸಾಫ್ಟ್ ಸ್ಕೀಲ್ಸ್ ಮತ್ತು ಬೇಸಿಕ್ ಕಂಪ್ಯೂಟರ್, ಕನ್ನಡ ನುಡಿ ಟೈಪಿಂಗ್ ತರಬೇತಿಯನ್ನು ಪಡೆಯಲು ಇಚ್ಚಿಸುವ ಆಸಕ್ತ ಯುವಕ, ಯುವತಿಯರು, ವಿದ್ಯಾರ್ಥಿಗಳು ನೋಂದಾವಣಿ ಮಾಡಬಹುದಾಗಿದೆ. ತರಬೇತಿಯು ಉಚಿತವಾಗಿದ್ದು, ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರ, ಜಿಲ್ಲಾಧಿಕಾರಿ ಸಂಕೀರ್ಣ, ರಜತಾದ್ರಿ, ಮಣಿಪಾಲ, ದೂ.ಸಂಖ್ಯೆ; 0820-2574869, 9480259790 ಅನ್ನು ಕಚೇರಿ ವೇಳೆಯಲ್ಲಿ ಸಂಪರ್ಕಿಸುವಂತೆ ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರದ ಉದ್ಯೋಗಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.