ಉಡುಪಿ: ಸಾಮಾಜಿಕ ಕಾರ್ಯಕರ್ತ ನಿತ್ಯಾನಂದ ಒಳಕಾಡು ನಗರದ ಮಾರುಥಿ ವಿಥಿಕಾ ರಸ್ತೆಯ ಜೋಸ್ ಅಲುಕಾಸ್ ಬಳಿ ಸಾರ್ವಜನಿಕರಿಗೆ ಅನುಕೂಲವಾಗುವ ನಿಟ್ಟಿನಲ್ಲಿ ಸ್ಥಾಪಿಸಿರುವ ಉಚಿತ ಶುದ್ದ ಕುಡಿಯುವ ನೀರಿನ ವ್ಯವಸ್ಥೆಗೆ ಚಾಲನೆ ನೀಡಲಾಯಿತು.
ದಿನೇ ದಿನೇ ಹೆಚ್ಚುತ್ತಿರುವ ಬಿಸಿಲಿನ ತಾಪದಿಂದ ತತ್ತರಿಸುತ್ತಿ ರುವ ಹಿರಿಯ ನಾಗರಿಕರು, ಮಹಿಳೆಯರಿಗೆ ಅನುಕೂಲವಾಗುವ ನಿಟ್ಟಿನಲ್ಲಿ ಈ ವ್ಯವಸ್ಥೆ ಮಾಡ ಲಾಗಿದ್ದು, ಐದನೇ ವರ್ಷದ ಈ ಸಾಮಾಜಿಕ ಕಾರ್ಯಕ್ಕೆ ಉಡುಪಿ ಜೋಸ್ ಅಲುಕಾಸ್ ಸಹಕಾರ ನೀಡಿದೆ.
ಉಚಿತ ಕುಡಿಯುವ ನೀರಿನ ವ್ಯವಸ್ಥೆಗೆ ಉದ್ಯಮಿ ಉದಯ್ ಕುಮಾರ್ ಚಾಲನೆ ನೀಡಿ ಶುಭ ಹಾರೈಸಿದರು. ಇಲ್ಲಿ ಜನರಿಗೆ ಉಚಿತ ಬೆಲ್ಲ ನೀರು ನೀಡುವುದು ಮಾತ್ರವಲ್ಲದೇ ಹಬ್ಬ ಹಾಗೂ ವಿಶೇಷ ದಿನಗಳಂದು ಪಾನಕ, ಜ್ಯೂಸ್ ವಿತರಿಸುವ ವ್ಯವಸ್ಥೆ ಮಾಡಲಾಗುವುದು ಎಂದು ನಿತ್ಯಾನಂದ ಒಳಕಾಡು ತಿಳಿಸಿದ್ದಾರೆ.
ಈ ಸಂದರ್ಭದಲ್ಲಿ ಜೋಸ್ ಅಲುಕಾಸ್ನ ಮ್ಯಾನೇಜರ್ ರಾಜೇಶ್ ಎನ್. ಆರ್., ಗೋಪಾಲ್, ಗಣೇಶ್ ಪಿಲಾರ್ ಮುಂತಾದವರು ಉಪಸ್ಥಿತರಿದ್ದರು.












