ಉಡುಪಿ: ಸಮಾಜ ಕಲ್ಯಾಣ ಇಲಾಖೆಯ ವತಿಯಿಂದ ಪ್ರಸಕ್ತ ಸಾಲಿನಲ್ಲಿ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಮಹಿಳಾ ಪದವೀಧರರು ಉದ್ಯಮಗಳನ್ನು ಸ್ಥಾಪಿಸಲು ಪೂರಕವಾಗುವಂತೆ ಬೆಂಗಳೂರಿನ ಐ.ಐ.ಎಂ ನಲ್ಲಿ ಉಚಿತ ಉದ್ಯಮಶೀಲತಾ ತರಬೇತಿಗಾಗಿ ಇಲಾಖೆಯ ವೆಬ್ಸೈಟ್ www.sw.kar.nic.in ನಲ್ಲಿ ಆನ್ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.
ಅರ್ಜಿ ಸಲ್ಲಿಸಲು ಜುಲೈ 18 ಕೊನೆಯ ದಿನ. ಹೆಚ್ಚಿನ ಮಾಹಿತಿಗಾಗಿ ಇಲಾಖೆಯ ಸಹಾಯವಾಣಿ ಸಂಖ್ಯೆ: 9482300400 ಅನ್ನು ಸಂಪರ್ಕಿಸಬಹುದಾಗಿದೆ ಎಂದು ಸಮಾಜ ಕಲ್ಯಾಣ ಇಲಾಖೆಯ ಉಪ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.