ಉಡುಪಿ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ, ಬಿಸಿ ಟ್ರಸ್ಟ್ ಉಡುಪಿ ತಾಲೂಕು, ಪೆರ್ಡೂರು ವಲಯ ಕುಕ್ಕೆಹಳ್ಳಿ ಕಾರ್ಯಕ್ಷೇತ್ರದಲ್ಲಿ ಸೆ.21 ರಂದು ನೇತ್ರ ಜ್ಯೋತಿ ಚಾರಿಟೇಬಲ್ ಟ್ರಸ್ಟ್, ಪ್ರಸಾದ್ ನೇತ್ರಾಲಯ, ರೋಟರಿ ಕ್ಲಬ್ ಮಣಿಪಾಲ, ಗ್ರಾಮ ಪಂಚಾಯತ್ ಕುಕ್ಕೆಹಳ್ಳಿ, ಹಾಲು ಉತ್ಪಾದಕರ ಸಹಕಾರಿ ಸಂಘ ಕುಕ್ಕೆಹಳ್ಳಿ ಇವರ ಸಹಯೋಗದೊಂದಿಗೆ ಮಹಿಳಾ ಜ್ಞಾನವಿಕಾಸ ಕಾರ್ಯಕ್ರಮದಡಿಯಲ್ಲಿ ಪದ್ಮ ವಿಭೂಷಣ ಡಾ. ವೀರೇಂದ್ರ ಹೆಗ್ಗಡೆಯವರು ಹಾಗೂ ಡಾ.ಹೇಮಾವತಿ ವಿ. ಹೆಗ್ಗಡೆಯವರ ಕೃಪಾಶೀರ್ವಾದಗಳೊಂದಿಗೆ ಉಚಿತ ನೇತ್ರ ತಪಾಸಣೆ ಹಾಗೂ ಪೊರೆ ಶಸ್ತ್ರ ಚಿಕಿತ್ಸೆ ಶಿಬಿರ ವನ್ನು ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಕುಕ್ಕೆಹಳ್ಳಿಯಲ್ಲಿ ಆಯೋಜನೆ ಮಾಡಲಾಯಿತು.
ಈ ಶಿಬಿರದಲ್ಲಿ 161 ಫಲಾನುಭವಿಗಳು ಪ್ರಯೋಜನ ಪಡೆದುಕೊಂಡರು. 107 ಜನರಿಗೆ ಕನ್ನಡಕವನ್ನು ವೈದ್ಯರು ಸೂಚಿಸಿದ್ದು,. ಉಚಿತ ಕನ್ನಡಕವನ್ನು ಇಂದು ವಿತರಿಸಲಾಯಿತು.



















