ಬಿಜೆಪಿ ಉಡುಪಿ ಜಿಲ್ಲಾ ಮಹಿಳಾ ಮೋರ್ಚಾದಿಂದ ಉಚಿತ ಕಣ್ಣಿನ ತಪಾಸಣಾ ಶಿಬಿರ

ಉಡುಪಿ: ಬಿಜೆಪಿ ಉಡುಪಿ ಜಿಲ್ಲಾ ಮಹಿಳಾ ಮೋರ್ಚಾದ ವತಿಯಿಂದ ಕೊಡವೂರು ಸೇವಾ ಸಮಿತಿ ಮತ್ತು ಪ್ರಸಾದ್ ನೇತ್ರಾಲಯದ ಪ್ರಾಯೋಜಕತ್ವದಲ್ಲಿ ಉಚಿತ ಕಣ್ಣಿನ ತಪಾಸಣಾ ಶಿಬಿರ ಕಾರ್ಯಕ್ರಮವನ್ನು ಇಂದು ಹಮ್ಮಿಕೊಳ್ಳಲಾಯಿತು.

ಜಿಲ್ಲಾ ಮಹಿಳಾ ಮೋರ್ಚಾದ ಅಧ್ಯಕ್ಷೆ ವೀಣಾ ಎಸ್ ಶೆಟ್ಟಿ ಅಧ್ಯಕ್ಷತೆ ವಹಿಸಿದ್ದರು. ಶಾಸಕ ಕೆ. ರಘುಪತಿ ಭಟ್ ಉದ್ಘಾಟಿಸಿದರು.

ನಗರ ಬಿಜೆಪಿಯ ಅಧ್ಯಕ್ಷ ಮಹೇಶ್ ಠಾಕೂರ್, ಪ್ರಸಾದ್ ನೇತ್ರಾಲಯದ ನಿರ್ದೇಶಕ ಕೃಷ್ಣಪ್ರಸಾದ್, ಜಿಲ್ಲಾ ಮಹಿಳಾ ಮೋರ್ಚಾ ಪ್ರಧಾನ ಕಾರ್ಯದರ್ಶಿ ರಶ್ಮಿತಾ ಬಾಲಕೃಷ್ಣ ಶೆಟ್ಟಿ, ನಗರಸಭಾ ಸದಸ್ಯ ವಿಜಯ ಕೊಡವೂರು, ಬ್ರಾಹ್ಮಣ ಸಮಿತಿಯ ಅಧ್ಯಕ್ಷ ಶ್ರೀನಿವಾಸ, ಕೊಡವೂರು ಆರೋಗ್ಯ ಸಮಿತಿಯ ಅಧ್ಯಕ್ಷ ಉಮೇಶ್, ನಗರ ಬಿಜೆಪಿಯ ಕಾರ್ಯದರ್ಶಿ ದಯಶಿನಿ, ನಗರ ಮಹಿಳಾ ಮೋರ್ಚಾದ ಉಪಾಧ್ಯಕ್ಷರಾದ ಶೈಲಾ, ಲೈಲಾ ಪ್ರಭಾವತಿ, ಕೊಡವೂರು ವಾರ್ಡಿನ ಬಿಜೆ ಪಿ ಅಧ್ಯಕ್ಷರು ಪದಾಧಿಕಾರಿಗಳು, ಕಾರ್ಯಕರ್ತರು ಉಪಸ್ಥಿತರಿದ್ದರು.