ಉಡುಪಿ: ಪ್ರಧಾನಿ ನರೇಂದ್ರ ಮೋದಿ ಅವರ 70ನೇ ಜನ್ಮದಿನಾಚರಣೆಯ ಅಂಗವಾಗಿ ಉಡುಪಿ ಜಿಲ್ಲಾ ಮಹಿಳಾ ಮೋರ್ಚಾ ವತಿಯಿಂದ ಕಡಿಯಾಳಿಯ ಜಿಲ್ಲಾ ಬಿಜೆಪಿ ಕಚೇರಿಯಲ್ಲಿ ಸೆಪ್ಟೆಂಬರ್ 19ರಂದು ಬೆಳಿಗ್ಗೆ 9 ಗಂಟೆಗೆ ಉಚಿತ ಕಣ್ಣಿನ ತಪಾಸಣೆ ಶಿಬಿರವನ್ನು ಆಯೋಜಿಸಲಾಗಿದೆ.
ಉಚಿತ ಕಣ್ಣಿನ ತಪಾಸಣೆ, ಉಚಿತ ಕನ್ನಡಕ ವಿತರಣೆ ಮತ್ತು ಅಗತ್ಯವಿದ್ದಲ್ಲಿ ಉಚಿತ ಕಣ್ಣಿನ ಶಸ್ತ್ರಚಿಕಿತ್ಸೆಯನ್ನು ಜಿಲ್ಲಾ ಮಹಿಳಾ ಮೋರ್ಚಾ ಮತ್ತು ಪ್ರಸಾದ್ ನೇತ್ರಾಲಯದ ಜಂಟಿ ಸಹಭಾಗಿತ್ವದಲ್ಲಿ ನಡೆಸಲಾಗುವುದು.
ಸಾರ್ವಜನಿಕರು ಇದರ ಸದುಪಯೋಗವನ್ನು ಪಡೆದುಕೊಳ್ಳುವಂತೆ ಜಿಲ್ಲಾ ಮಹಿಳಾ ಮೋರ್ಚಾದ ಅಧ್ಯಕ್ಷೆ ವೀಣಾ. ಎಸ್. ಶೆಟ್ಟಿ ವಿನಂತಿಸಿದ್ದಾರೆ.