ಉಡುಪಿ: ನರೇಂದ್ರ ಮೋದಿಯವರ 70ನೇ ಜನ್ಮ ದಿನಾಚರಣೆಯ ಸೇವಾ ಸಪ್ತಾಹದ ಅಂಗವಾಗಿ ಸೆಪ್ಟೆಂಬರ್ 19 ರಂದು ನಡೆದಂತಹ ಉಚಿತ ಕಣ್ಣಿನ ತಪಾಸಣಾ ಶಿಬಿರದಲ್ಲಿ ಭಾಗವಹಿಸಿದ ಶಿಬಿರಾರ್ಥಿಗಳಿಗೆ ಉಚಿತ ಕನ್ನಡಕ ವಿತರಣಾ ಕಾರ್ಯಕ್ರಮವು ಇದೇ ಬರುವ ಅಕ್ಟೋಬರ್ 11ರಂದು ಬೆಳಿಗ್ಗೆ 11 ಗಂಟೆಗೆ ಉಡುಪಿ ಜಿಲ್ಲಾ ಬಿಜೆಪಿ ಕಚೇರಿಯಲ್ಲಿ ನಡೆಯಲಿದೆ.
ಸಂಸದೆ ಶೋಭಾ ಕರಂದ್ಲಾಜೆ ಫಲಾನುಭವಿಗಳಿಗೆ ಕನ್ನಡಕ ವಿತರಣೆ ಮಾಡಲಿದ್ದಾರೆ. ಬಿಜೆಪಿ ಜಿಲ್ಲಾಧ್ಯಕ್ಷ ಕುಯಿಲಾಡಿ ಸುರೇಶ್ ನಾಯಕ್, ನೇತ್ರತಜ್ಞ ಡಾ. ಕೃಷ್ಣಪ್ರಸಾದ್ ಮುಖ್ಯ ಅತಿಥಿಗಳಾಗಿ ಭಾಗವಹಿಸುವರು ಎಂದು ಬಿಜೆಪಿ ಉಡುಪಿ ಜಿಲ್ಲಾ ಮಹಿಳಾ ಮೋರ್ಚಾದ ಅಧ್ಯಕ್ಷೆ ವೀಣಾ ಎಸ್. ಶೆಟ್ಟಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.