ಜೂ. 28 ರಂದು ಕುಕ್ಕುಂದೂರಿನಲ್ಲಿ ಉಚಿತ ಆರೋಗ್ಯ ತಪಾಸಣಾ ಶಿಬಿರ

ಕಾರ್ಕಳ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ (ರಿ.) ಕಾರ್ಕಳ ತಾಲೂಕು, ಕಾರ್ಕಳ ವಲಯ ಹಾಗೂ ಶ್ರೀ ಮಂಜುನಾಥೇಶ್ವರ ಆಯುರ್ವೇದ ಕಾಲೇಜು ಮತ್ತು ಆಸ್ಪತ್ರೆ, ಕುತ್ರಾಡಿ, ಉಡುಪಿ ಇವರ ಸಂಯುಕ್ತ ಆಶ್ರಯದಲ್ಲಿ ಶ್ರೀ ದುರ್ಗಾಪರಮೇಶ್ವರಿ ವಿವಿದೋದ್ದೇಶ ಸಹಕಾರ ಸಂಘ (ನಿ.) ಜೋಡುರಸ್ತೆ ವತಿಯಿಂದ ಉಚಿತ ಆರೋಗ್ಯ ತಪಾಸಣಾ ಶಿಬಿರವನ್ನು ಜೂ. 28, ರಂದು ಕುಕ್ಕುಂದೂರು ಸಮುದಾಯ ಭವನದಲ್ಲಿ ಬೆಳಿಗ್ಗೆ 8.30ರಿಂದ ಮಧ್ಯಾಹ್ನ 1 ಗಂಟೆಯವರೆಗೆ ಆಯೋಜಿಸಲಾಗಿದೆ.

ಶಿಬಿರದಲ್ಲಿ ಇಸಿಜಿ, ವಾತಚಿಕಿತ್ಸೆ, ಸಂಧಿವಾತ, ಬೆನ್ನುನೋವು ಹಾಗೂ ಕುತ್ತಿಗೆ ನೋವು ಸೇರಿದಂತೆ ಕಣ್ಣಿನ ಸಮಸ್ಯೆಗಳು, ಕಿವಿ-ಮೂಗು-ಗಂಟಲು ಸಂಬಂಧಿತ ತೊಂದರೆಗಳು, ಮೂಳೆ ಮತ್ತು ಕೀಲು ಸಮಸ್ಯೆಗಳು, ನರರೋಗ, ಸ್ತ್ರೀರೋಗ, ಚರ್ಮರೋಗ, ಮಧುಮೇಹ, ರಕ್ತದೊತ್ತಡ, ಶ್ವಾಸಕೋಶದ ತೊಂದರೆಗಳು ಹಾಗೂ ಪಂಚಕರ್ಮ ಚಿಕಿತ್ಸೆಗಳ ಕುರಿತು ತಪಾಸಣೆ ಮತ್ತು ವೈದ್ಯಕೀಯ ಸಲಹೆ ನೀಡಲಾಗುತ್ತದೆ.

ಅಗತ್ಯವಿರುವ ರೋಗಿಗಳಿಗೆ ಸೂಕ್ತ ಚಿಕಿತ್ಸಾ ಮಾರ್ಗದರ್ಶನ ಹಾಗೂ ಹೆಚ್ಚಿನ ಚಿಕಿತ್ಸೆಗೆ ಸಲಹೆ ನೀಡಲಾಗುವುದು ಎಂದು ಸಂಘಟಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಸಾರ್ವಜನಿಕರು ಈ ಉಚಿತ ಆರೋಗ್ಯ ಶಿಬಿರದ ಸದುಪಯೋಗ ಪಡೆದುಕೊಳ್ಳುವಂತೆ ಮನವಿ ಮಾಡಿದ್ದಾರೆ.