ವಕ್ವಾಡಿಯಲ್ಲಿ ಪ್ರವೀಣ್ ಕುಮಾರ್ ಶೆಟ್ಟಿ ಪ್ರಾಯೋಜಕತ್ವದಲ್ಲಿ ಉಚಿತ ಆರೋಗ್ಯ ತಪಾಸಣೆ ಶಿಬಿರ

ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಉದ್ಯಮಿ ವಕ್ವಾಡಿ ಪ್ರವೀಣ್ ಕುಮಾರ್ ಶೆಟ್ಟಿ ಪ್ರಾಯೋಜಕತ್ವದಲ್ಲಿ ಉಚಿತ ಕಣ್ಣಿನ ತಪಾಸಣೆ ಹಾಗೂ ಆರೋಗ್ಯ ತಪಾಸಣೆ ಶಿಬಿರವನ್ನು ವಕ್ವಾಡಿಯ ಫಾರ್ಚೂನ್ ವಿಲೇಜ್ ಹೋಟೆಲ್ ಬಳಿ ಭಾನುವಾರ ಏರ್ಪಡಿಸಲಾಗಿತ್ತು.ಶಿಬಿರವನ್ನು ಉದ್ಘಾಟಿಸಿದ ಉದ್ಯಮಿ ಗುರ್ಮೆ ಸುರೇಶ್ ಶೆಟ್ಟಿ ಮಾತನಾಡಿ, ಮನುಷ್ಯ ಸಂಸಾರಮುಖಿಯಾಗಿರದೆ ಸಮಾಜಮುಖಿಯಾಗಿ ಬದುಕಿದರೆ ಸನ್ಮಾನಗಳು ಹುಡುಕಿ ಬರುತ್ತದೆ. ಕರ್ತವ್ಯವು ಧರ್ಮದ ಕಡೆಗೆ ಇರಬೇಕು. ಈ ನಿಟ್ಟಿನಲ್ಲಿ ಪರಿಶ್ರಮದಿಂದ ಬದುಕು ಕಟ್ಟಿಕೊಳ್ಳಬೇಕು ಎಂದು ಹೇಳಿದರು. ಇದೇ ಸಂದರ್ಭದಲ್ಲಿ ಜಾಗತಿಕ ಬಂಟರ ಸಂಘದಿಂದ ಪ್ರವೀಣ್ ಕುಮಾರ್ ಶೆಟ್ಟಿ ಹಾಗೂ ರೂಪಾಲಿ ಪ್ರವೀಣ್ ಕುಮಾರ್ ಶೆಟ್ಟಿಯವರನ್ನು ಸನ್ಮಾನಿಸಲಾಯಿತು. ಕಾಳಾವರ ಗ್ರಾಪಂ ಅಧ್ಯಕ್ಷೆ ಆಶಲತಾ ಶೆಟ್ಟಿ ಅಧ್ಯಕ್ಷತೆ ವಹಿಸಿದ್ದರು. ವಿಶ್ವ ಬಂಟರ ಸಂಘಗಳ ಒಕ್ಕೂಟದ ಅಧ್ಯಕ್ಷ ಐಕಳ ಹರೀಶ್ ಶೆಟ್ಟಿ, ಉಡುಪಿ ಪ್ರಸಾದ ನೇತ್ರಾಲಯದ ವೈದ್ಯಕೀಯ ನಿರ್ದೇಶಕ ಡಾ.ಕೃಷ್ಣಪ್ರಸಾದ್, ಬಸ್ರೂರು ಅಪ್ಪಣ್ಣ ಹೆಗ್ಡೆ, ಆನಂದ್ ಸಿ.ಕುಂದರ್, ಉದಯಕುಮಾರ್ ಶೆಟ್ಟಿ ಬೈಲೂರು, ಜಾಗತಿಕ ಬಂಟರ ಸಂಘದ ಕಾರ್ಯದರ್ಶಿ ಜಯಕರ ಶೆಟ್ಟಿ ಇಂದ್ರಾಳಿ, ಕುಂದಾಪುರ ರೂರಲ್ ಆಯುರ್ವೇದಿಕ್ ಮೆಡಿಕಲ್ ಕಾಲೇಜು ಪ್ರಾಂಶುಪಾಲ ಡಾ.ಪ್ರಸನ್ನ ಐತಾಳ್, ಉದ್ಯಮಿ ವಕ್ವಾಡಿ ಪ್ರವೀಣ್ ಕುಮಾರ್ ಶೆಟ್ಟಿ, ನಾರಾಯಣ ಶೆಟ್ಟಿ, ಸರೋಜಿನಿ ಶೆಟ್ಟಿ ಉಪಸ್ಥಿತರಿದ್ದರು. ಸತೀಶ್ ಪೂಜಾರಿ ವಕ್ವಾಡಿ ಸ್ವಾಗತಿಸಿದರು. ಬಾಲಕೃಷ್ಣ ಶೆಟ್ಟಿ ಪ್ರಾಸ್ತಾವಿಕವಾಗಿ ಮಾತನಾಡಿದರು. ಅಕ್ಷತಾ ಗಿರೀಶ್ ಕಾರ್ಯಕ್ರಮ ನಿರೂಪಿಸಿದರು. ಸದಾನಂದ ಶೆಟ್ಟಿ ವಂದಿಸಿದರು.