ಉಡುಪಿ ಜಿಲ್ಲೆಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ವತಿಯಿಂದ ವಿವಿಧ ಸಂಸ್ಥೆಗಳ ಸಹಯೋಗದಲ್ಲಿ ಉಚಿತ ಆರೋಗ್ಯ ತಪಾಸಣಾ ಶಿಬಿರವನ್ನು ಶೆಟ್ಟಿಬೆಟ್ಟು ಹಿರಿಯ ಪ್ರಾಥಮಿಕ ಶಾಲೆಯಲ್ಲಿ ನಾಳೆ (ಫೆ.5) ಬೆಳಿಗ್ಗೆ 10ರಿಂದ ಮಧ್ಯಾಹ್ನ 1ಗಂಟೆಯ ವರೆಗೆ ಆಯೋಜಿಸಲಾಗಿದೆ.
ಈ ಶಿಬಿರದಲ್ಲಿ ಮಹಿಳೆಯರಿಗಾಗಿ ಗರ್ಭಕಂಠದ ಕ್ಯಾನ್ಸರ್ ತಪಾಸಣೆ ಶಿಬಿರ ಹಮ್ಮಿಕೊಂಡಿದ್ದು, 30 ವರ್ಷ ಮೇಲ್ಪಟ್ಟ ಎಲ್ಲ ಮಹಿಳೆಯರು ಇದರ ಪ್ರಯೋಜನ ಪಡೆದುಕೊಳ್ಳಬಹುದು ಎಂದು ಆರೋಗ್ಯ ಇಲಾಖೆಯ ಪ್ರಕಟಣೆ ತಿಳಿಸಿದೆ.