ಉಡುಪಿ: ಲ್ಯಾಪ್‍ಟಾಪ್ ಸೌಲಭ್ಯ-ಅರ್ಜಿ ಆಹ್ವಾನ

ಉಡುಪಿ: ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆಯಿಂದ 2019-20 ನೇ ಸಾಲಿನಲ್ಲಿ ವಿತರಿಸಲ್ಪಡುವ ಎಸ್.ಎಸ್.ಎಲ್.ಸಿ ಮತ್ತು ಉನ್ನತ ವ್ಯಾಸಾಂಗ ಮಾಡುತ್ತಿರುವ ಶೇ.40 ಮತ್ತು ಅದಕ್ಕಿಂತ ಹೆಚ್ಚಿನ ದೃಷ್ಟಿದೋಷವುಳ್ಳ (ಇಲಾಖೆಯಿಂದ ಪಡೆದ ಅಧಿಕೃತ ಗುರುತು ಚೀಟಿ ಮತ್ತು ವೈದ್ಯಕೀಯ ಪ್ರಮಾಣ ಪತ್ರ ಹೊಂದಿರುವ) ವಿದ್ಯಾರ್ಥಿಗಳಿಗೆ ಉಚಿತ ಲ್ಯಾಪ್‍ಟಾಪ್‍ಗಾಗಿ ಅರ್ಜಿಗಳನ್ನು ಆಹ್ವಾನಿಸಲಾಗಿದೆ.

ಆಸಕ್ತರು ಆಗಸ್ಟ್ 20 ರ ಒಳಗೆ ಜಿಲ್ಲಾ ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಅಧಿಕಾರಿಯವರ ಕಚೇರಿ, ಜಿಲ್ಲಾಧಿಕಾರಿಗಳ ಸಂಕೀರ್ಣ, ರಜತಾದ್ರಿ, ಮಣಿಪಾಲ, ಉಡುಪಿ ಇಲ್ಲಿಗೆ ಅರ್ಜಿ ಸಲ್ಲಿಸಬೇಕು.

ಹೆಚ್ಚಿನ ಮಾಹಿತಿಗಾಗಿ ದೂರವಾಣಿ ಸಂಖ್ಯೆ: 0820-2574810/ 2574811 ನ್ನು ಸಂಪರ್ಕಿಸುವಂತೆ ಜಿಲ್ಲಾ ವಿಕಲಚೇತನರ ಸಬಲೀಕರಣ ಅಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.