ಶ್ವಾನಗಳಿಗೆ ಉಚಿತ ರೇಬೀಸ್ ರೋಗ ಲಸಿಕಾ ಕಾರ್ಯಕ್ರಮ

ಉಡುಪಿ: ಎ.ಎಸ್.ಸಿ.ಎ.ಡಿ ಯೋಜನೆಯಡಿ ಪ್ರಸಕ್ತ ಸಾಲಿನಲ್ಲಿ ಜಿಲ್ಲೆಯಾದ್ಯಂತ ರೇಬೀಸ್ ರೋಗ ತಡೆಗಟ್ಟುವ ನಿಟ್ಟಿನಲ್ಲಿ ಪಶುಪಾಲನಾ ಮತ್ತು ಪಶುವೈದ್ಯಕೀಯ ಸೇವಾ ಇಲಾಖೆ ವತಿಯಿಂದ ಶ್ವಾನಗಳಿಗೆ ಉಚಿತವಾಗಿ ರೇಬೀಸ್ ಲಸಿಕಾ ಕಾರ್ಯಕ್ರಮವನ್ನು ಆಯೋಜಿಸಲಾಗಿರುತ್ತದೆ.

ಎಲ್ಲಾ ಶ್ವಾನಗಳ ಮಾಲೀಕರು ತಮ್ಮ ಸಮೀಪದ ಪಶುವೈದ್ಯಕೀಯ ಸಂಸ್ಥೆಗಳನ್ನು ಸಂಪರ್ಕಿಸಿ, ಶ್ವಾನಗಳಿಗೆ ಉಚಿತವಾಗಿ ರೇಬೀಸ್ ರೋಗ ನಿಯಂತ್ರಣ ಲಸಿಕೆಯನ್ನು ಹಾಕಿಸುವುದರ ಮೂಲಕ ಇದರ ಸದುಪಯೋಗ ಪಡೆಯಬೇಕೆಂದು ಪಶುಪಾಲನಾ ಮತ್ತು ಪಶುವೈದ್ಯಕೀಯ ಸೇವಾ ಇಲಾಖೆಯ ಉಪನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.