ಸರ್ಕಾರಿ ಬಸ್​ಗಳಲ್ಲಿ ಮಹಿಳೆಯರ ಉಚಿತ ಪ್ರಯಾಣಕ್ಕೆ ಅನುಮತಿ: ಸಾರಿಗೆ ಸಚಿವ ರಾಮಲಿಂಗ ರೆಡ್ಡಿ

ಬೆಂಗಳೂರು: ಸರ್ಕಾರಿ ಬಸ್​ಗಳಲ್ಲಿ ಮಹಿಳೆಯರು ಉಚಿತವಾಗಿ ಪ್ರಯಾಣಿಸಬಹುದು ಎಂದು ಸಾರಿಗೆ ಸಚಿವ ರಾಮಲಿಂಗ ರೆಡ್ಡಿ ತಿಳಿಸಿದ್ದಾರೆ. ಅವರು ಇಂದು ಶಾಂತಿನಗರದ ಕೆಎಸ್​ಆರ್​ಟಿಸಿ ಕಚೇರಿಯಲ್ಲಿ ಸರ್ಕಾರಿ ಬಸ್ ಗಳಲ್ಲಿ ಮಹಿಳೆಯರ ಉಚಿತ ಪ್ರಯಾಣಕ್ಕೆ ಸಂಬಂಧಿಸಿ ನಡೆದ ಸಭೆ ಬಳಿಕ ಮಾಧ್ಯಮಗಳಿಗೆ ಮಾಹಿತಿ ನೀಡಿದರು.

ಕಾಂಗ್ರೆಸ್ ಪಕ್ಷ ತನ್ನ ಪ್ರಣಾಳಿಕೆಯಲ್ಲಿ ಎಪಿಎಲ್‌ ಅಥವಾ ಬಿಪಿಎಲ್‌ ಅಂತ ಹೇಳಿಲ್ಲ. ಹಾಗಾಗಿ, ಕರ್ನಾಟಕದಾದ್ಯಂತ ಮಹಿಳೆಯರಿಗೆ ಉಚಿತ ಪ್ರಯಾಣ ಇರಲಿದೆ ಎಂದು ಅವರು ತಿಳಿಸಿದರು.

ಮೇ.29 ರಂದು ಸಾರಿಗೆ ಇಲಾಖೆ ಪ್ರಧಾನ ಕಾರ್ಯದರ್ಶಿ ಜೊತೆ ಸಿಎಂ ಸಿದ್ದರಾಮಯ್ಯನವರು ಸಮಾಲೋಚನೆ ನಡೆಸಿದ್ದಾರೆ ಎಂದು ತಿಳಿಸಿದ ಅವರು ಈ ಬಗ್ಗೆ ಅಂತಿಮ ತೀರ್ಮಾನವನ್ನು ಸಿಎಂ ಸಿದ್ದರಾಮಯ್ಯನವರು ತೆಗೆದುಕೊಳ್ಳಲಿದ್ದಾರೆ ಎಂದರು.