ಜೂನ್ 15ರಿಂದ ಮಣಿಪಾಲ ಕೆಎಂಸಿ ಆಸ್ಪತ್ರೆಯ ಎಲ್ಲ ಹೊರರೋಗಿ ವಿಭಾಗಗಳು ಎಂದಿನಂತೆ ಸೇವೆಗೆ ಲಭ್ಯ

ಮಣಿಪಾಲ: ಇಲ್ಲಿನ ಕಸ್ತೂರ್ಬಾ ಆಸ್ಪತ್ರೆಯ ಎಲ್ಲ ಹೊರರೋಗಿ ವಿಭಾಗಗಳು ಜೂನ್ 15ರಿಂದ ಬೆಳಿಗ್ಗೆ 8ರಿಂದ ಸಂಜೆ 4 ಗಂಟೆಯರೆಗೆ  ಹಿಂದಿನಂತೆ ಸೇವೆಗೆ ಲಭ್ಯವಾಗಲಿದೆ ಎಂದು ಆಸ್ಪತ್ರೆಯ ವೈದ್ಯಕೀಯ ಅಧೀಕ್ಷಕ ಡಾ. ಅವಿನಾಶ ಶೆಟ್ಟಿ ತಿಳಿಸಿದ್ದಾರೆ.
ಆಸ್ಪತ್ರೆಗೆ ಭೇಟಿ ನೀಡುವ ಪ್ರತಿಯೊಬ್ಬರು ಆಸ್ಪತ್ರೆಯ ಹೊರಾಂಗಣದಲ್ಲಿ ಹಾಕಿರುವ ತಾತ್ಕಾಲಿಕ ಜ್ವರದ ಚಿಕಿತ್ಸಾಲಯಕ್ಕೆ ಭೇಟಿ ನೀಡಬೇಕು. ನಂತರ ಸಂಬಂಧ ಪಟ್ಟ ವಿಭಾಗಗಳಿಗೆ ಕಳುಹಿಸಿಕೊಡಲಾಗುವುದು. ಎಲ್ಲಾ ರೋಗಿಗಳು ಮತ್ತು ಆಸ್ಪತ್ರೆಗೆ ಭೇಟಿ ನೀಡುವ ಪ್ರತಿಯೊಬ್ಬರು ಖಡ್ಡಾಯವಾಗಿ ಮುಖಗವಸು (ಮಾಸ್ಕ್) ಧರಿಸಬೇಕು ಮತ್ತು ಪ್ರತೀ ರೋಗಿಗಳೊಂದಿಗೆ ಒಬ್ಬ ಸಹಾಯಕರಿಗೆ ಮಾತ್ರ ಅವಕಾಶ ಕಲ್ಪಿಸಲಾಗುವುದು ಎಂದು ಹೇಳಿದ್ದಾರೆ.
ನಮ್ಮ ಎಲ್ಲಾ ಮಾಹಿತಿ ಕೇಂದ್ರಗಳು ಸಹ ಸೋಮವಾರದಿಂದ ಕಾರ್ಯನಿರ್ವಹಿಸಲಿದ್ದು, ಜನರು ತಮ್ಮ ಊರಿನಲ್ಲಿಯೇ ನೋಂದಣಿ ಮಾಡಿ ಬರಬಹುದು. ಇದರಿಂದ ಆಸ್ಪತ್ರೆಯಲ್ಲಿ ನೋಂದಣಿಗಾಗಿ ಸರತಿ ಸಾಲಿನಲ್ಲಿ ನಿಲ್ಲುವುದು ಮತ್ತು ಜನದಟ್ಟಣೆ ಸೇರುವುದನ್ನು ಕಡಿಮೆ ಮಾಡಬಹುದು ಎಂದು ಅವರು ಮಾಹಿತಿ ನೀಡಿದ್ದಾರೆ.