ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕೊರೊನಾ ಪ್ರಕರಣಗಳು ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಜಿಲ್ಲೆಯಾದ್ಯಂತ ಸಾರ್ವಜನಿಕ ಜಾತ್ರೆ, ಉತ್ಸವ, ಸಭೆ, ಸಮಾರಂಭ ಮುಂತಾದ ಸಾರ್ವಜನಿಕ ಕಾರ್ಯಕ್ರಮಗಳನ್ನು ನಿಷೇಧಿಸಿ ಜಿಲ್ಲಾಧಿಕಾರಿ ಡಾ. ರಾಜೇಂದ್ರ ಕೆ.ವಿ. ಅವರು ಮಂಗಳವಾರ ಆದೇಶ ಹೊರಡಿಸಿದ್ದಾರೆ.
ಕಳೆದ 15 ದಿನಗಳಿಂದ ಕೊರೊನಾ ಸೋಂಕು ಪ್ರಕರಣಗಳು ದಾಖಲಾಗುತ್ತಿದ್ದು, ಈ ಹಿನ್ನೆಲೆಯಲ್ಲಿ ಸರ್ಕಾರದ ಆದೇಶದಂತೆ ಮುಂಬರುವ ಹಬ್ಬಗಳಾದ ಯುಗಾದಿ, ಹೋಳಿ ಹಬ್ಬ, ಷಬ್-ಎ-ಬರಾತ್, ಗುಡ್‌ಫ್ರೈಡೆ ಇತ್ಯಾದಿ ಸಂದರ್ಭಗಳಲ್ಲಿ ಸಾರ್ವಜನಿಕ ಕಾರ್ಯಕ್ರಮಗಳನ್ನು ನಡೆಸದಂತೆ ಮತ್ತು ಧಾರ್ಮಿಕ ಉತ್ಸವಗಳೊಂದಿಗೆ ಜಾತ್ರೆ/ಮೇಳಗಳನ್ನು ನಡೆಸದಂತೆ ಆದೇಶಿಸಲಾಗಿದೆ ಎಂದು ತಿಳಿಸಿದ್ದಾರೆ.
ಇನ್ನು ಮುಂದಿನ ಆದೇಶದವರೆಗೆ ಈ ನಿಯಮಗಳು ಜಾರಿಯಲ್ಲಿರುತ್ತವೆ ಎಂದು ಜಿಲ್ಲಾಧಿಕಾರಿಗಳು ತಿಳಿಸಿದ್ದಾರೆ.