ಉಡುಪಿ: ಉಡುಪಿ ಭ್ರಷ್ಟಾಚಾರ ನಿಗ್ರಹ ದಳ ಪೊಲೀಸ್ ಠಾಣೆಯ ಅಧಿಕಾರಿ ಮತ್ತು ಸಿಬ್ಬಂದಿಗಳು ಮೇ 24 ಮತ್ತು 25 ರಂದು ರಂದು ಬೆಳಗ್ಗೆ 11 ರಿಂದ ಮಧ್ಯಾಹ್ನ 1 ರ ವರೆಗೆ ಬೈಂದೂರು ಪ್ರವಾಸಿ ಮಂದಿರ ಹಾಗೂ ಮ. 2.30 ರಿಂದ ಸಂಜೆ 4.30 ರ ವರೆಗೆ ಕುಂದಾಪುರ ಪ್ರವಾಸಿ ಮಂದಿರದಲ್ಲಿ ಸಾರ್ವಜನಿಕರಿಂದ ಅಹವಾಲು ಸ್ವೀಕರಿಸಲಿದ್ದಾರೆ.
ಸಾರ್ವಜನಿಕ ನೌಕರ ತನ್ನ ದಿನನಿತ್ಯದ ಕೆಲಸಗಳನ್ನು ನಿರ್ವಹಿಸಲು ಅನಗತ್ಯ ವಿಳಂಬ ಮಾಡಿದಲ್ಲಿ, ನಿರ್ಲಕ್ಷ್ಯತೆ ತೋರಿದಲ್ಲಿ ಅಥವಾ ಲಂಚ ಕೇಳಿದಲ್ಲಿ ದೂರು ಸ್ವೀಕರಿಸಲಾಗುವುದು ಎಂದು ಭ್ರಷ್ಟಾಚಾರ ನಿಗ್ರಹ ದಳ ಪೊಲೀಸ್ ಠಾಣೆಯ ಉಪಾಧೀಕ್ಷಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.