ದ.ಕ. ಜಿಲ್ಲೆ: ಗುರುವಾರದಿಂದ ದಕ್ಷಿಣ ಕನ್ನಡ ಜಿಲ್ಲೆ ಅನ್ ಲಾಕ್

ಮಂಗಳೂರು: ಗುರುವಾರದಿಂದ ದಕ್ಷಿಣ ಕನ್ನಡ ಜಿಲ್ಲೆ ಅನ್ ಲಾಕ್ ಆಗಲಿದ್ದು, ಗುರುವಾರ ಬೆಳಗ್ಗೆ 5 ಗಂಟೆ ತನಕ ಮಾತ್ರ ಲಾಕ್ ಡೌನ್ ಇರಲಿದೆ ಎಂದು ದ.ಕ.ಜಿಲ್ಲಾ ಉಸ್ತುವಾರಿ ಸಚಿವ ಕೋಟಾ ಶ್ರೀನಿವಾಸ ಪೂಜಾರಿ ಹೇಳಿಕೆ ನೀಡಿದ್ದಾರೆ.

ಈ ಹಿಂದೆ ಅವಕಾಶ ನೀಡಿದ್ದ ಎಲ್ಲಾ ಕ್ಷೇತ್ರಗಳೂ ಚಟುವಟಿಕೆ ನಡೆಸಬಹುದು ಎಂದು ಅವರು ತಿಳಿಸಿದ್ದಾರೆ.