ದೊಡ್ಡಣಗುಡ್ಡೆ: ಜ. 26-28 ರ ವರೆಗೆ ತೋಟಗಾರಿಕಾ ಕ್ಷೇತ್ರದಲ್ಲಿ ಫಲಪುಷ್ಪ ಪ್ರದರ್ಶನ

ಉಡುಪಿ: ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ತೋಟಗಾರಿಕೆ ಇಲಾಖೆ ಉಡುಪಿ ಜಿಲ್ಲೆ ಇವರ ಸಹಯೋಗದೊಂದಿಗೆ ಫಲಪುಷ್ಪ ಪ್ರದರ್ಶನವು ಜನವರಿ 26 ರಿಂದ 28 ರ ವರೆಗೆ ನಗರದ ದೊಡ್ಡಣಗುಡ್ಡೆ ಶಿವಳ್ಳಿ ಮಾದರಿ ತೋಟಗಾರಿಕಾ ಕ್ಷೇತ್ರದ ಪುಷ್ಪ ಹರಾಜು ಕೇಂದ್ರ (ರೈತ ಸೇವಾ ಕೇಂದ್ರ)ದ ಆವರಣದಲ್ಲಿ ನಡೆಯಲಿದೆ.

ಕಾರ್ಯಕ್ರಮವನ್ನು ಜನವರಿ 26 ರಂದು ಬೆಳಗ್ಗೆ 8.30 ಕ್ಕೆ ರಾಜ್ಯದ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ, ವಿಕಲಚೇತನರ ಹಾಗೂ ಹಿರಿಯ ನಾಗರೀಕರ ಸಬಲೀಕರಣ ಇಲಾಖೆ ಮತ್ತು ಜಿಲ್ಲಾ ಉಸ್ತುವಾರಿ ಸಚಿವೆ ಲಕ್ಷ್ಮೀ ಆರ್ ಹೆಬ್ಬಾಳ್ಕರ್ ಉದ್ಘಾಟಿಸಲಿದ್ದು, ಶಾಸಕ ಯಶ್‌ಪಾಲ್ ಎ ಸುವರ್ಣ ಅಧ್ಯಕ್ಷತೆ ವಹಿಸಲಿದ್ದಾರೆ.