ಉಡುಪಿ: ಹಣ್ಣು, ತರಕಾರಿ ಮತ್ತು ದಿನಸಿ ವರ್ತಕರ ಸಂಘ ಆದಿ ಉಡುಪಿ ಕೃಷಿ ಉತ್ಪನ್ನ ಮಾರುಕಟ್ಟೆ ಇದರ ಉದ್ಘಾಟನಾ ಸಮಾರಂಭ ಬುಧವಾರ ಆದಿ ಉಡುಪಿ ಕೃಷಿ ಉತ್ಪನ್ನ ಮಾರುಕಟ್ಟೆ ಪ್ರಾಂಗಣದಲ್ಲಿ ನಡೆಯಿತು.
ಶಾಸಕ ಕೆ. ರಘುಪತಿ ಭಟ್ ಭಾಗವಹಿಸಿ ಉದ್ಘಾಟನೆ ನೆರವೇರಿಸಿ ಶುಭಹಾರೈಸಿದರು.
ಹಣ್ಣು, ತರಕಾರಿ ಮತ್ತು ದಿನಸಿ ವರ್ತಕರ ಸಂಘ ಸಂಘದ ಅಧ್ಯಕ್ಷ ಸತೀಶ್ ನಾಯಕ್ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಉಡುಪಿ ನಗರ ಸಭೆಯ ಅಧ್ಯಕ್ಷೆ ಸುಮಿತ್ರಾ ಆರ್ ನಾಯಕ್, ಉಪಾಧ್ಯಕ್ಷೆ ಲಕ್ಷ್ಮೀ ಮಂಜುನಾಥ ಕೊಳ, ಉಡುಪಿ ಜಿಲ್ಲಾ ಚೇಂಬರ್ ಆಫ್ ಕಾಮರ್ಸ್ ಆಂಡ್ ಇಂಡಸ್ಟ್ರಿ ಅಧ್ಯಕ್ಷ ಅಂಡಾರು ದೇವಿಪ್ರಸಾದ್ ಶೆಟ್ಟಿ, ನಗರ ಸಭಾ ಸದಸ್ಯೆ ಸವಿತಾ ಹರೀಶ್ ರಾಮ್, ಶ್ರೀಷ ಕೊಡವೂರು ಹಾಗೂ ಹಣ್ಣು, ತರಕಾರಿ ಮತ್ತು ದಿನಸಿ ವರ್ತಕರ ಸಂಘದ ಸರ್ವ ಸದಸ್ಯರು ಉಪಸ್ಥಿತರಿದ್ದರು.