ಉಡುಪಿ,ಜ.29: ರಾಜ್ಯದ ಇಂಧನ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವ ವಿ ಸುನಿಲ್ ಕುಮಾರ್ ಜನವರಿ 30 ರಿಂದ ಫೆ. 1 ರ ವರೆಗೆ ಜಿಲ್ಲೆಯಲ್ಲಿ ಪ್ರವಾಸ ಕೈಗೊಳ್ಳಲಿದ್ದಾರೆ.
ಜ.30 ರಂದು ಬೆಳಗ್ಗೆ 11 ಗಂಟೆಗೆ ನಗರದ ಆದರ್ಶ ಆಸ್ಪತ್ರೆಯಲ್ಲಿ ಆದರ್ಶ ಕಾಲೇಜು ಆಫ್ ನರ್ಸಿಂಗ್ ಮತ್ತು ಆದರ್ಶ ಇನ್ಸ್ಟಿಟ್ಯೂಟ್ ಆಫ್ ಪ್ಯಾರಾಮೆಡಿಕಲ್ ಸೈನ್ಸ್ ಕಾಲೇಜು ಉದ್ಘಾಟನಾ ಕಾರ್ಯಕ್ರಮ, ಮ.12 ಕ್ಕೆ ಶಿವಪುರದಲ್ಲಿ ಗ್ರಾಮ ಪಂಚಾಯತ್ ವ್ಯಾಪ್ತಿಯ ಕಿಂಡಿ ಆಣೆಕಟ್ಟು ನಿರ್ಮಾಣ ಕಾಮಗಾರಿ ಉದ್ಘಾಟನೆ ಹಾಗೂ ವಿವಿಧ ಕಾಮಗಾರಿಗಳಿಗೆ ಗುದ್ದಲಿಪೂಜೆ, ಮ. 3 ಗಂಟೆಗೆ ಮುದ್ರಾಡಿ ಗ್ರಾಮ ಪಂಚಾಯತ್ ವ್ಯಾಪ್ತಿಯ ವಿವಿಧ ಕಾಮಗಾರಿಗಳ ಗುದ್ದಲಿಪೂಜೆ ಮತ್ತು ಉದ್ಘಾಟನಾ ಕಾರ್ಯಕ್ರಮ, ಸಂಜೆ 4 ಗಂಟೆಗೆ ಮುದ್ರಾಡಿ ಶ್ರೀ ಆದಿಶಕ್ತಿ ಮಹಮ್ಮಾಯಿ ದೇವಸ್ಥಾನ ಭೇಟಿ ನೀಡಲಿದ್ದಾರೆ.
5 ಗಂಟೆಗೆ ವರಂಗ ಗ್ರಾಮ ಪಂಚಾಯತ್ ವ್ಯಾಪ್ತಿಯ ವಿವಿಧ ಕಾಮಗಾರಿಗಳ ಗುದ್ದಲಿ ಪೂಜೆ ಮತ್ತು ಉದ್ಘಾಟನಾ ಕಾರ್ಯಕ್ರಮದಲ್ಲಿ ಭಾಗವಹಿಸಿ, ನಂತರ ಕಾರ್ಕಳದಲ್ಲಿ ವಾಸ್ತವ್ಯ ಹೂಡಲಿದ್ದಾರೆ.
ಜ.31 ರಂದು ಬೆಳಗ್ಗೆ 8 ರಿಂದ 11 ಗಂಟೆಯ ವರೆಗೆ ಮಿಯ್ಯಾರು, ನಲ್ಲೂರು, ಈದು, ಮಾಳ ಮತ್ತು ಮುಡಾರು ಗ್ರಾಮ ಪಂಚಾಯತ್ ವ್ಯಾಪ್ತಿಯ ವಿವಿಧ ಕಾಮಗಾರಿಗಳಿಗೆ ಗುದ್ದಲಿಪೂಜೆ ಮತ್ತು ಉದ್ಘಾಟನಾ ಕಾರ್ಯಕ್ರಮ, ಮ.3 ಗಂಟೆಗೆ ಉಡುಪಿಯ ಮೆಸ್ಕಾಂ ಕಚೇರಿಯಲ್ಲಿ ಮೆಸ್ಕಾಂ ಪ್ರಗತಿ ಪರಿಶೀಲನಾ ಸಭೆಯಲ್ಲಿ ಭಾಗವಹಿಸಲಿರುವರು.
ಫೆ.1 ರಂದು ಬೆಳಗ್ಗೆ 10 ಗಂಟೆಯಿಂದ ಮ.12 ರ ವರೆಗೆ ಕುಚ್ಚೂರು, ಚಾರಾ ಹಾಗೂ ಹೆಬ್ರಿ ಗ್ರಾಮ ಪಂಚಾಯತ್ ವ್ಯಾಪ್ತಿಯ ವಿವಿಧ ಕಾಮಗಾರಿಗಳ ಗುದ್ದಲಿಪೂಜೆ ಮತ್ತು ಉದ್ಘಾಟನಾ ಕಾರ್ಯಕ್ರಮದಲ್ಲಿ ಭಾಗವಹಿಸಿ, ನಂತರ ಮಂಗಳೂರಿಗೆ ತೆರಳಲಿರುವರು.