ಇಂಧನ ಬೆಲೆ ಏರಿಕೆ: ಸೈಕಲ್ ನಲ್ಲಿ ಓಡಾಡಿದ್ರೆ ಒಳ್ಳೆಯ ವ್ಯಾಯಮ ಆಗುತ್ತೆ ಎಂದ ಬಿಜೆಪಿ‌ ಸಂಸದ.!

ದಾವಣಗೆರೆ: ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆ ಕುರಿತು ದಾವಣಗೆರೆ ಬಿಜೆಪಿ‌ ಸಂಸದ ಜಿ.ಎಂ. ಸಿದ್ದೇಶ್ವರ್ ಬೇಜವಾಬ್ದಾರಿ ಹೇಳಿಕೆ ನೀಡಿದ್ದಾರೆ.

“ಪೆಟ್ರೋಲ್ ಬೆಲೆ ಏರಿಕೆಯಿಂದ ಜನರು ಸೈಕಲ್ ಏರುವ ಪರಿಸ್ಥಿತಿ ಬಂದಿದೆ ಎಂದು ಕಾಂಗ್ರೆಸ್ ಆರೋಪಿಸುತ್ತಿದೆ” ಎಂಬ ಸುದ್ದಿಗಾರರ ಪ್ರಶ್ನೆಗೆ ಉತ್ತರಿಸಿದ ಅವರು, ಸೈಕಲ್ ನಲ್ಲಿ ಓಡಾಡಿದ್ರೆ ಒಳ್ಳೆಯ ವ್ಯಾಯಮ ಆಗುತ್ತದೆ ಎಂದು ಉಢಾಪೆಯ ಉತ್ತರ ನೀಡಿದ್ದಾರೆ.

ಕಚ್ಚಾ ತೈಲದ ಬೆಲೆ ಜಾಸ್ತಿ ಇದೆ, ಹೀಗಾಗಿ ಪೆಟ್ರೋಲ್ ಬೆಲೆ ಜಾಸ್ತಿ ಆಗಿದೆ. ಜನ ಸೈಕಲ್​ನಲ್ಲಿ ಓಡಾಡಿದ್ರೆ ಏನ್ ಆಗುತ್ತೆ. ಒಳ್ಳೆಯ ವ್ಯಾಯಾಮ ಆಗುತ್ತೆ ಎಂದು ಬಾಲಿಶ ಹೇಳಿಕೆ ನೀಡಿದ್ದಾರೆ.

ಪೆಟ್ರೋಲ್ ಬೆಲೆ ಜಾಸ್ತಿ ಆದ್ರೆ ಏನ್ ಮಾಡ್ಲಿಕ್ಕೆ ಆಗುತ್ತೆ?. ಅದನ್ನು ಪ್ರಧಾನಿ ಮೋದಿ ನೋಡುತ್ತಾರೆ. ಕೊವಿಡ್ ಹೋದ ಮೇಲೆ ಪೆಟ್ರೋಲ್ ದರ ಇಳಿಸುತ್ತಾರೆ ಎಂದು ಮಾಹಿತಿ ನೀಡಿದ್ದಾರೆ.