ಬೆಂಗಳೂರು:ರಾಜ್ಯ ಸರ್ಕಾರ ಹೊರಡಿಸಿರುವ ಹೊಸ ಮಾರ್ಗಸೂಚಿಯ ಪ್ರಕಾರ ರಾಜ್ಯಾದ್ಯಂತ ಪ್ರತಿ ಭಾನುವಾರ ಸಂಪೂರ್ಣ ಲಾಕ್ ಡೌನ್ ಇರಲಿದ್ದು, ಬಸ್, ವಾಹನ ಸಂಚಾರ ಹಾಗೂ ವ್ಯಾಪಾರ ವಹಿವಾಟಿಗೆ ಅವಕಾಶ ಇರುವುದಿಲ್ಲ. ಮದ್ಯದಂಗಡಿ ಕೂಡ ಬಂದ್ ಆಗಿರುತ್ತದೆ.
ಸರ್ಕಾರಿ ಹಾಗೂ ಖಾಸಗಿ ಬಸ್ ಸಂಚಾರಕ್ಕೆ ಅವಕಾಶ ಕಲ್ಪಿಸಲಾಗಿದ್ದು, ಬೆಳಿಗ್ಗೆ 7ರಿಂದ ಸಂಜೆ 7ರ ವರೆಗೆ ಬಸ್ ಗಳು ಓಡಾಟ ನಡೆಸಬಹುದು. ಆದರೆ ಒಂದು ಬಸ್ ನಲ್ಲಿ 30 ಜನರ ಓಡಾಟಕ್ಕೆ ಮಾತ್ರ ಅವಕಾಶ ನೀಡಲಾಗಿದೆ. ಯಾವುದೇ ಕಾರಣಕ್ಕೂ ದರ ಏರಿಕೆಗೆ ಅವಕಾಶ ಇರುವುದಿಲ್ಲ ಎಂದು ಹೊಸ ಮಾರ್ಗಸೂಚಿಯಲ್ಲಿ ತಿಳಿಸಲಾಗಿದೆ.
ರಾಜ್ಯದೊಳಗೆ ರೈಲು ಸಂಚಾರಕ್ಕೆ ಅನುಮತಿ ನೀಡಲಾಗಿದೆ. ಉಳಿದಂತೆ ಸೆಲೂನ್ ಸೇರಿದಂತೆ ಎಲ್ಲ ತರದ ಅಂಗಡಿಗಳನ್ನು ತೆರೆಯಲು ಅವಕಾಶ ನೀಡಲಾಗಿದೆ.












