ಪೆಲತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ‘ಬ್ರಹ್ಮಕಲಶೋತ್ಸವ’ ಪ್ರಯುಕ್ತ ದೇಗುಲದಲ್ಲಿ ನಡೆದ ಗಣಹೋಮ, ಮಹಾರುದ್ರಯಾಗ

ಉಡುಪಿ: ಕಾರ್ಕಳ ತಾಲೂಕಿನ ಪೆಲತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಶ್ರೀ ಮಹಾಲಿಂಗೇಶ್ವರ ಶ್ರೀ ಮಹಾಗಣಪತಿ, ಶ್ರೀ ಭದ್ರಕಾಳಿ ದೇವರಿಗೆ ಮೇ.25 ರ ವರೆಗೆ ಬ್ರಹ್ಮಕಲಶೋತ್ಸವ ನಡೆಯಲ್ಲಿದ್ದು, ಆ ಪ್ರಯುಕ್ತ ದೇಗುಲದಲ್ಲಿ ಮೇ 23ರ ಬೆಳಿಗ್ಗೆ ಗಂಟೆ 8.00ರಿಂದ ಗಣಪತಿ ಹೋಮ, ಶ್ರೀ ಮಹಾರುದ್ರಯಾಗ, ಮಹಾತತ್ವ ಹೋಮ, ತತ್ವ ಕಲಶಾಭಿಷೇಕ, ತತ್ವನ್ಯಾಸ, ಮಹಾಪೂಜೆ, ಸಹಸ್ರ ಬ್ರಹ್ಮಕಲಶದ ಮಂಡಲ ರಚನೆ, ಮಧ್ಯಾಹ್ನ ಅನ್ನಸಂತರ್ಪಣೆ ನಡೆಯಿತು. ಮಂಟಪ ಸಂಸ್ಕಾರ, ಸಹಸ್ರಕಲಶಾಧಿವಾಸ, ಕಲಶಾಧಿವಾಸ ಹೋಮಗಳು ಹಾಗೂ ಅಷ್ಟಾವಧಾನ ಧಾರ್ಮಿಕ ಕಾರ್ಯಕ್ರಮಗಳು ಭಕ್ತರ ಸಮ್ಮುಖದಲ್ಲಿ ನಡೆಯಿತು.

ಹಾಗೂ ಊರ ಕಲಾವಿದರಿಂದ ನೃತ್ಯ ವೈದ್ಯದ ಕಾರ್ಯಕ್ರಮ ಹಾಗೂ ಖ್ಯಾತ ಕಲಾವಿದರಿಂದ ಹರಿಕಥಾ ಕಾಲಕ್ಷೇಪ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆಯಿತು.