ಕುಂದಾಪುರ ಶ್ರೀ ವೆಂಕಟರಮಣ ಸಮೂಹ ವಿದ್ಯಾ ಸಂಸ್ಥೆಗಳಲ್ಲಿ ಗಾಂಧೀಜಿ ಹಾಗೂ ಶಾಸ್ತ್ರಿ ಜಯಂತಿ ಆಚರಣೆ

ಕುಂದಾಪುರ: ಕುಂದಾಪುರ ಶ್ರೀ ವೆಂಕಟರಮಣ ಆಂಗ್ಲ ಮಾಧ್ಯಮ ಶಾಲೆಯ ಸ್ಕೌಟ್ಸ್ ಮತ್ತು ಗೈಡ್ಸ್ ಘಟಕಗಳ ಸಹಯೋಗದೊಂದಿಗೆ ಗಾಂಧೀ ಹಾಗೂ ಶಾಸ್ತ್ರಿ ಜಯಂತಿ ಆಚರಣೆಯನ್ನು ಶ್ರೀ ವೆಂಕಟರಮಣ ಸಮೂಹ ವಿದ್ಯಾಸಂಸ್ಥೆಯಲ್ಲಿ ಆಚರಿಸಲಾಯಿತು.

ಜಿಲ್ಲಾ ಸ್ಕೌಟ್ಸ್ ಮತ್ತು ಗೈಡ್ಸ್ ನ ಸ್ಥಾನೀಯ ಆಯುಕ್ತರಾದ ಕೊಗ್ಗ ಗಾಣಿಗ ಕಾರ್ಯಕ್ರಮವನ್ನು ಉದ್ಘಾಟಿಸಿ, ಗಾಂಧೀ ಹಾಗೂ ಶಾಸ್ತ್ರಿ ವಿಚಾರಧಾರೆಗಳ ಕುರಿತು ಮಾತನಾಡಿದರು.

ಜಿಲ್ಲಾ ಸ್ಕೌಟ್ಸ್ ಮತ್ತು ಗೈಡ್ಸ್ ನ ತರಬೇತಿ ಆಯುಕ್ತ ಆನಂದ ಅಡಿಗ ಅವರು, ಸ್ಕೌಟ್ಸ್ ಮತ್ತು ಗೈಡ್ಸ್ ಘಟಕಗಳ ಕುರಿತು ಮಾತನಾಡಿದರು.
ಈ ಸಂದರ್ಭದಲ್ಲಿ ಗಾಂಧೀ ಹಾಗೂ ಶಾಸ್ತ್ರಿಗಳ ಭಾವಚಿತ್ರಗಳಿಗೆ ಪುಷ್ಪನಮನ ಸಲ್ಲಿಸಲಾಯಿತು.

ಕಾರ್ಯಕ್ರಮದಲ್ಲಿ ಪ್ರೌಢಶಾಲೆಯ ಮುಖ್ಯ ಶಿಕ್ಷಕ ಕೃಷ್ಣ ಅಡಿಗ, ಪ್ರಾಥಮಿಕ ಶಾಲಾ ಮುಖ್ಯ ಶಿಕ್ಷಕಿ ರೇಷ್ಮಾ ಡಿಸೋಜ, ಪ್ರೌಢಶಾಲೆಯ ದೈಹಿಕ ಶಿಕ್ಷಣ ಶಿಕ್ಷಕ ಸುಬ್ರಹ್ಮಣ್ಯ ಉಪಸ್ಥಿತರಿದ್ದರು. ಸಂಸ್ಥೆಯ ಬೋಧಕ, ಬೋಧಕೇತರ ಸಿಬ್ಬಂದಿ ಭಾಗವಹಿಸಿದ್ದರು.

ಸಂಸ್ಥೆಯ ಗೈಡ್ ಶಿಕ್ಷಕಿಯರಾದ ಪದ್ಮಾವತಿ ಹಾಗೂ ಅಶ್ವಿನಿ ಪ್ರಾರ್ಥಿಸಿದರು. ಸಂಸ್ಥೆಯ ಕನ್ನಡ ಉಪನ್ಯಾಸಕ ಉದಯ್ ನಾಯ್ಕ್ ಕಾರ್ಯಕ್ರಮ ನಿರೂಪಿಸಿದರು. ಮುಖ್ಯ ಶಿಕ್ಷಕಿ ಪ್ರಮೀಳಾ ಡಿಸೋಜಾ ವಂದಿಸಿದರು.