ಮಂಗಳೂರು: ಪುತ್ತೂರಿನಲ್ಲಿ ನಡೆದ ಗ್ಯಾಂಗ್ ರೇಪ್ ಪ್ರಕರಣವನ್ನು ಖಂಡಿಸಿ ಕಾಂಗ್ರೆಸ್ ವತಿಯಿಂದ ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಕಚೇರಿ ಮುಂಭಾಗದಲ್ಲಿ ಸೋಮವಾರ ಪ್ರತಿಭಟನೆ ನಡೆಯಿತು.
ಪ್ರತಿಭಟನಾ ಸಭೆಯಲ್ಲಿ ಮಾತನಾಡಿದ ಮಾಜಿ ಶಾಸಕಿ ಶಂಕುತಳಾ ಶೆಟ್ಟಿ, ಜಿಲ್ಲೆಯಲ್ಲಿ ನಡೆದ ಇತರ ಪ್ರಕರಣಗಳಲ್ಲಿ ಕಾಂಗ್ರೆಸ್ ನ್ನು ಟೀಕೆ ಮಾಡುವ ಶೋಭಾ ಕರಂದ್ಲಾಜೆ ಅವರು, ತಮ್ಮದೇ ಹುಟ್ಟೂರಾದ ಪುತ್ತೂರಿನಲ್ಲಿ ನಡೆದ ಅತ್ಯಾಚಾರ ಪ್ರಕರಣದ ಕುರಿತು ಯಾಕೆ ಮೌನ ವಹಿಸಿದ್ದಾರೆ. ಅಲ್ಲದೇ ಜಿಲ್ಲೆಯ ಸಂಸದರು ಕೂಡ ಯಾವುದೇ ಪ್ರತಿಕ್ರಿಯೆ ನೀಡಿಲ್ಲ, ಒಂದು ವೇಳೆ ಇದೇ ಪ್ರಕರಣದಲ್ಲಿ ಅಲ್ಪಸಂಖ್ಯಾತರು ಇರುತ್ತಿದ್ದರೆ ಇಡೀ ದಕ್ಷಿಣ ಕನ್ನಡಕ್ಕೆ ಬೆಂಕಿ ಇಡುತ್ತಿದ್ದರು ಎಂದು ಬಿಜೆಪಿ ವಿರುದ್ಧ ಕಿಡಿ ಕಾರಿದರು.
ಪ್ರತಿಭಟನೆಯಲ್ಲಿ ಮಾಜಿ ಸಚಿವ ರಮಾನಾಥ್ ರೈ, ಮಾಜಿ ಶಾಸಕ ಮೊಯಿದಿನ್ ಬಾವಾ, ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಹರೀಶ್ ಕುಮಾರ್, ಮಿಥುನ್ ರೈ ಉಪಸ್ಥಿತರಿದ್ದರು.