udupixpress
Home Trending ಪ್ರತಿಷ್ಠಿತ ವಡ್ಡರ್ಸೆ ರಘುರಾಮ ಶೆಟ್ಟಿ ಪತ್ರಿಕೋದ್ಯಮ ಪ್ರಶಸ್ತಿಗೆ ಗಂಗಾಧರ ಹಿರೇಗುತ್ತಿ ಆಯ್ಕೆ

ಪ್ರತಿಷ್ಠಿತ ವಡ್ಡರ್ಸೆ ರಘುರಾಮ ಶೆಟ್ಟಿ ಪತ್ರಿಕೋದ್ಯಮ ಪ್ರಶಸ್ತಿಗೆ ಗಂಗಾಧರ ಹಿರೇಗುತ್ತಿ ಆಯ್ಕೆ

ಕೋಟ: ಬ್ರಹ್ಮಾವರ ತಾಲೂಕು ಪತ್ರಕರ್ತರ ಸಂಘದ ಆಶ್ರಯದಲ್ಲಿ ಪ್ರತಿ ವರ್ಷ ಮುಂಗಾರು ಪತ್ರಿಕೆಯ ಸಂಪಾದಕ ದಿ. ವಡ್ಡರ್ಸೆ ರಘುರಾಮ ಶೆಟ್ಟಿ ಹೆಸರಲ್ಲಿ ಕೊಡಮಾಡುವ ಪತ್ರಿಕೋದ್ಯಮ ಪ್ರಶಸ್ತಿಗೆ ಕರಾವಳಿ ಮುಂಜಾವು ದಿನಪತ್ರಿಕೆಯ ಸಂಪಾದಕ ಗಂಗಾಧರ ಹಿರೇಗುತ್ತಿ ಈ ಬಾರಿ ಆಯ್ಕೆಯಾಗಿದ್ದಾರೆ.

ಇಂದು ನಡೆದ ಸುದ್ದಿಗೋಷ್ಠಿಯಲ್ಲಿ ಬ್ರಹ್ಮಾವರ ತಾಲೂಕು ಪತ್ರಕರ್ತರ ಸಂಘದ ಅಧ್ಯಕ್ಷ ಚಿತ್ತೂರು ಪ್ರಭಾಕರ ಆಚಾರ್ಯ ಈ ಕುರಿತು ಮಾಹಿತಿ ನೀಡಿದರು.

ಅ.11ರಂದು ಸಂಜೆ 4.30ಕ್ಕೆ ಬ್ರಹ್ಮಾವರದ ಬಂಟರ ಭವನದಲ್ಲಿಪ್ರಶಸ್ತಿ ಪ್ರದಾನ ಕಾರ್ಯಕ್ರಮ ನಡೆಯಲಿದ್ದು , ಖ್ಯಾತ ಸಾಹಿತಿ ಅಂಬಾತನಯ ಮುದ್ರಾಡಿ ಪ್ರಶಸ್ತಿ ಪ್ರದಾನ ಮಾಡುವರು ಎಂದರು.
ಗಂಗಾಧರ ಹಿರೇಗುತ್ತಿಯವರು ‘ಮುಂಗಾರು’ ದಿನಪತ್ರಿಕೆಯಲ್ಲಿ ಉತ್ತರ ಕನ್ನಡದ ವರದಿಗಾರನಾಗಿ ೧೦ ವರ್ಷ ಸೇವೆ ಸಲ್ಲಿಸಿ, ಅನಂತರ ಕಾರವಾರದ ಜಿಲ್ಲಾ ಕೇಂದ್ರದಿಂದ ‘ಕರಾವಳಿ ಮುಂಜಾವು’ ದಿನಪತ್ರಿಕೆ ಆರಂಭಿಸಿದರು.