ಗಂಗೊಳ್ಳಿ: ಇಲ್ಲಿನ ಶ್ರೀಮಹಾಕಾಳಿ ದೇವಳದ ಹಿಂಬದಿಯ ದೇವಸ್ಥಾನದಲ್ಲಿ ಇಂದು ಮಧ್ಯಾಹ್ನದ ಸುಮಾರಿಗೆ ವ್ಯಕ್ತಿಯೊಬ್ಬರು ಮೈಮೇಲೆ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆಗೆ ಯತ್ನಿಸಿದ ಘಟನೆ ನಡೆದಿದೆ. ಈತನನ್ನು ರಕ್ಷಿಸಲು ಹೋದ ಇಬ್ಬರಿಗೆ ತೀವ್ರ ಸುಟ್ಟ ಗಾಯಗಳಾಗಿವೆ.
ದಾಕುಹಿತ್ಲು ನಿವಾಸಿ ರಾಘವೇಂದ್ರ ಖಾರ್ವಿ(35) ಎಂಬಾತ ಆತ್ಮಹತ್ಯೆಗೆ ಯತ್ನಿಸಿದ ವ್ಯಕ್ತಿ. ಬೆಂಕಿ ನಂದಿಸಲು ಹೋಗಿ ಗಾಯಗೊಂಡವರನ್ನು ಗಂಗೊಳ್ಳಿಯ ಲಕ್ಷ್ಮಣ ಖಾರ್ವಿ ಹಾಗೂ ಜನಾರ್ದನ ಖಾರ್ವಿ ಎಂದು ಗುರುತಿಸಲಾಗಿದೆ. ಮೂವರನ್ನೂ ಮಣಿಪಾಲ ಆಸ್ಪತ್ರೆಗೆ ದಾಖಲಿಸಲಾಗಿದೆ.
ಆತ್ಮಹತ್ಯೆ ಯತ್ನಕ್ಕೆ ನಿಖರವಾದ ಕಾರಣ ತಿಳಿದುಬಂದಿಲ್ಲ. ಸ್ಥಳಕ್ಕೆ ಗಂಗೊಳ್ಳಿ ಪೊಲೀಸರು ಆಗಮಿಸಿ ಪರಿಶೀಲನೆ ನಡೆಸುತ್ತಿದ್ದಾರೆ. ಗಾಯಾಳುಗಳನ್ನು ಇಬ್ರಾಹಿಂ ಗಂಗೊಳ್ಳಿ ಮತ್ತು ರಜಬ್ ಗಂಗೊಳ್ಳಿ ಆಪತ್ಬಾಂಧವ ಆ್ಯಂಬುಲೆನ್ಸ್ನಲ್ಲಿ ಆಸ್ಪತ್ರೆಗೆ ಸಾಗಿಸಿದ್ದಾರೆ.