ಗಂಗೊಳ್ಳಿ : ಪುರಾಣ ಪ್ರಸಿದ್ಧ ಮಲ್ಯರಮಠ ಶ್ರೀ ವೆಂಕಟರಮಣ ದೇವಸ್ಥಾನದಲ್ಲಿ ಸಾಂಪ್ರದಾಯಿಕವಾಗಿ ಆಚರಿಸಿಕೊಂಡು ಬಂದಿರುವ ಅನಂತ ಚತುರ್ದಶಿ ವೃತವನ್ನು ಗುರುವಾರ ಶ್ರದ್ಧಾ ಭಕ್ತಿಯಿಂದ ಆಚರಿಸಲಾಯಿತು.
ದೇವಳದ ಪ್ರಧಾನ ಅರ್ಚಕ ವೇದಮೂರ್ತಿ ಎಸ್.ವೆಂಕಟರಮಣ ಆಚಾರ್ಯ ನೇತೃತ್ವದಲ್ಲಿ ಅನಂತ ಚತುರ್ದಶಿ ವೃತದ ವಿವಿಧ ಧಾರ್ಮಿಕ ಅನುಷ್ಠಾನಗಳು ಶಾಸ್ತ್ರೋಕ್ತವಾಗಿ ಜರಗಿತು. ಅನಂತ ಚತುರ್ದಶಿ ಪ್ರಯುಕ್ತ ಶ್ರೀ ದೇವರಿಗೆ ವಿಶೇಷ ಪೂಜೆ, ಪುನಸ್ಕಾರಗಳು, ನಮಸ್ಕಾರ ಸೇವೆ ಸಹಿತ ಇನ್ನಿತರ ಧಾರ್ಮಿಕ ಕಾರ್ಯಕ್ರಮಗಳು ವಿಜೃಂಭಣೆಯಿಂದ ಸಂಪನ್ನಗೊಂಡಿತು. ಅರ್ಚಕ ವೃಂದದವರು, ದೇವಳದ ಆಡಳಿತ ಮಂಡಳಿ ಸದಸ್ಯರು, ಊರಿನ ಹತ್ತು ಸಮಸ್ತರು, ಸಮಾಜ ಬಾಂಧವರು, ಭಜಕರು ಕಾರ್ಯಕ್ರಮದಲ್ಲಿ ಪಾಲ್ಗೊಂಡು ಪ್ರಸಾದ ಸ್ವೀಕರಿಸಿದರು.