ಗಂಗೊಳ್ಳಿ: ಕೊರೊನಾ ಸೋಂಕು ಹರಡದಂತೆ ಮುನ್ನೆಚ್ಚರಿಕೆ ಕೈಗೊಳ್ಳಿ:ಸ್ಥಳೀಯರಿಗೆ ಟಾಸ್ಕ್ ಪೋರ್ಸ್ ಸಮಿತಿ ಸದಸ್ಯರ ಸೂಚನೆ

ಗಂಗೊಳ್ಳಿ : ಕೊರೊನಾ ಸೋಂಕು ಹರಡದಂತೆ ತಡೆಗಟ್ಟುವ ನಿಟ್ಟಿನಲ್ಲಿ ಗಂಗೊಳ್ಳಿ ಗ್ರಾಮ ಪಂಚಾಯತ್‌ನ ಟಾಸ್ಕ್ ಪೋರ್ಸ್ ಸಮಿತಿ ಸದಸ್ಯರು ಗಂಗೊಳ್ಳಿಯ ವಿವಿಧೆಡೆ ತೆರಳಿ ಪರಿಶೀಲನೆ ನಡೆಸಿದರು.

ಬೇರೆ ದೇಶ, ರಾಜ್ಯ ಹಾಗೂ ಜಿಲ್ಲೆಗಳಿಂದ ಆಗಮಿಸಿದ ಜನರ ಮಾಹಿತಿ ಪಡೆದುಕೊಂಡ ಸಮಿತಿ ಸದಸ್ಯರು, ಕೊರೊನಾ ತಡೆಗಟ್ಟುವ ನಿಟ್ಟಿನಲ್ಲಿ ಆರೋಗ್ಯ ಹಾಗೂ ಪೊಲೀಸ್ ಇಲಾಖೆ ನೀಡುತ್ತಿರುವ ಸೂಚನೆಗಳನ್ನು ಕಡ್ಡಾಯವಾಗಿ ಪಾಲಿಸಬೇಕು. ಕ್ವಾರಂಟೈನ್‌ನಲ್ಲಿರುವವರು ಯಾವುದೇ ಕಾರಣಕ್ಕೂ ಸಾರ್ವಜನಿಕ ಪ್ರದೇಶಗಳಲ್ಲಿ ಸಂಚರಿಸಬಾರದು. ೧೪ ದಿನಗಳ ಕಾಲ ಮನೆಯಲ್ಲೇ ಇದ್ದು ಸಹಕಾರ ನೀಡಬೇಕು ಎಂದು ಮನವಿ ಮಾಡಿದರು.

ಗಂಗೊಳ್ಳಿ ಗ್ರಾಮ ಪಂಚಾಯತ್ ಅಧ್ಯಕ್ಷ ಶ್ರೀನಿವಾಸ ಖಾರ್ವಿ, ಉಪಾಧ್ಯಕ್ಷೆ ಪ್ರೇಮಾ ಪೂಜಾರಿ, ಸಮಿತಿ ಸದಸ್ಯರಾದ ಬಿ.ರಾಘವೇಂದ್ರ ಪೈ, ಗ್ರಾಮ ಪಂಚಾಯತ್ ಕಾರ್ಯದರ್ಶಿ ದಿನೇಶ ಶೇರುಗಾರ್, ಅಂಗನವಾಡಿ ಕಾರ್ಯಕರ್ತೆ ಫಿಲೋಮಿನಾ ಫೆರ್ನಾಂಡಿಸ್, ಆಶಾ ಕಾರ್ಯಕರ್ತೆ ರೇಣುಕಾ, ಗಂಗೊಳ್ಳಿ ಪೊಲೀಸ್ ಠಾಣೆಯ ಎಎಸ್‌ಐ ವೆಂಕಟೇಶ ಗೊಲ್ಲ, ಸಿಬ್ಬಂದಿಗಳಾದ ಮೋಹನ, ಚಂದ್ರಶೇಖರ, ಪ್ರಿನ್ಸ್ ಮತ್ತಿತರರು ಉಪಸ್ಥಿತರಿದ್ದರು.