ಮೇ 26: ಗಂಗೊಳ್ಳಿ ಶಾಲಾ-ಕಾಲೇಜು ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ, ಉಚಿತ ನೋಟ್ಸ್ ಪುಸ್ತಕ ವಿತರಣೆ

ಗಂಗೊಳ್ಳಿ : ಶ್ರೀ ಇಂದುಧರ ದೇವಸ್ಥಾನ ಗಂಗೊಳ್ಳಿ ಇವರ ಆಶ್ರಯದಲ್ಲಿ ಶಾಲಾ ಕಾಲೇಜುಗಳ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ಮತ್ತು ಬಡ ಮಕ್ಕಳಿಗೆ ಉಚಿತ ನೋಟ್ಸ್ ಪುಸ್ತಕ ವಿತರಣಾ ಸಮಾರಂಭ ಗಂಗೊಳ್ಳಿ ಶ್ರೀ ಇಂದುಧರ ದೇವಸ್ಥಾನದ ಸಭಾಂಗಣದಲ್ಲಿ ಮೇ 26ರಂದು ಸಂಜೆ 4 ಗಂಟೆಗೆ ನಡೆಯಲಿದೆ.
ಜಿಲ್ಲಾ ಪಂಚಾಯತ್ ಸದಸ್ಯೆ ಶೋಭಾ ಜಿ.ಪುತ್ರನ್ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಲಿದ್ದಾರೆ. ಗಂಗೊಳ್ಳಿ ಗ್ರಾಪಂ ಅಧ್ಯಕ್ಷ ಶ್ರೀನಿವಾಸ ಖಾರ್ವಿ, ಮತ್ಸ್ಯೋದ್ಯಮಿ ಜಿ.ಟಿ.ಮಂಜುನಾಥ ಮತ್ತಿತರರು ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲಿದ್ದಾರೆ ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.