ಮಂಗಳೂರು: ದ್ವಿಚಕ್ರ ವಾಹನಲ್ಲಿ ಗಾಂಜಾ ಸಾಗಿಸುತ್ತಿದ್ದ ಇಬ್ಬರನ್ನು ಪಣಂಬೂರು ಪೊಲೀಸರು ಬಂಧಿಸಿದ್ದಾರೆ..
ನಿಹಾಲ್ ಎಡ್ವಿನ್ ಹಾಗೂ ತ್ರಿಶೂಲ್ ಬಂಧಿತ ಆರೋಪಿಗಳು.
ಮಂಗಳೂರಿನ ಹೊರ ವಲಯ ತಣ್ಣೀರು ಬಾವಿಯಲ್ಲಿ ಪೊಲೀಸರು ವಾಹನ ತಪಾಸಣೆ ನಡೆಸುತ್ತಿದ್ದಾಗ ಆರೋಪಿಗಳು ವಾಹನ ಬಿಟ್ಟು ಓಡಲು ಪ್ರಯತ್ನಿಸಿದ್ದಾಗ ಆರೋಪಿಗಳನ್ನು ಪೊಲೀಸರು ಬೆನ್ನಟ್ಟಿ ಹಿಡಿದು ಬಂಧಿಸಿದ್ದಾರೆ.. ಆರೋಪಿಗಳಿಂದ ಒಟ್ಟು 5,17,000 ಮೌಲ್ಯದ ವಸ್ತುಗಳನ್ನು ವಶಪಡಿಸಿಕೊಂಡಿದ್ದು, ಆರೋಪಿಗಳನ್ನು ದಸ್ತಗಿರಿ ಮಾಡಿ ನ್ಯಾಯಾಲಯಕ್ಕೆ ಹಾಜರು ಪಡಿಸಲಾಗಿದೆ.