ಕುಂದಾಪುರ: ಕೆನರಾ ಬ್ಯಾಂಕ್ ವತಿಯಿಂದ ಶ್ರೀ ವೆಂಕಟರಮಣ ಸಮೂಹ ಸಂಸ್ಥೆಗೆ ಜನರೇಟರ್ ಕೊಡುಗೆ

ಕುಂದಾಪುರ: ಕೆನರಾ ಬ್ಯಾಂಕ್ ವತಿಯಿಂದ ಶ್ರೀ ವೆಂಕಟರಮಣ ಸಮೂಹ ಸಂಸ್ಥೆಗೆ ನೂತನ ಜನರೇಟರ್ ಅನ್ನು ಕೊಡುಗೆಯಾಗಿ ನೀಡಲಾಯಿತು.

ಕೆನರಾ ಬ್ಯಾಂಕ್ ಮಣಿಪಾಲ ಇಲ್ಲಿನ ಪ್ರಧಾನ ವ್ಯವಸ್ಥಾಪಕರಾದ ಎಂ. ಜಿ. ಪಂಡಿತ್ ನೂತನ ಜನರೇಟರ್ ಅನ್ನು ಉದ್ಘಾಟಿಸಿ, ಸಂಸ್ಥೆಗೆ ಶುಭ ಹಾರೈಸಿದರು.

ಕಾರ್ಯಕ್ರಮದಲ್ಲಿ ಕುಂದಾಪುರ ಕೆನರಾ ಬ್ಯಾಂಕ್ ನ ಮುಖ್ಯ ವ್ಯವಸ್ಥಾಪಕಿ ಭಾರತಿ ವಸಂತ್, ವೆಂಕಟರಮಣ ಸಂಸ್ಥೆಯ ಕಾರ್ಯದರ್ಶಿ ಕೆ. ರಾಧಾಕೃಷ್ಣ ಶೆಣೈ, ವೆಂಕಟರಮಣ ಸಂಸ್ಥೆಯ ಖಜಾಂಚಿ ಕೆ. ಲಕ್ಷ್ಮೀ ನಾರಾಯಣ ಶೆಣೈ, ವೆಂಕಟರಮಣ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲೆ ರಾಗಿಣಿ, ಪ್ರೌಢಶಾಲೆಯ ಮುಖ್ಯೋಪಾಧ್ಯಾಯ ಕೃಷ್ಣ ಅಡಿಗ, ಪ್ರಾಥಮಿಕ ವಿಭಾಗದ ಮುಖ್ಯೋಪಾಧ್ಯಾಯಿನಿ ರೇಷ್ಮಾ ಡಿಸೋಜಾ, ಪೂರ್ವ ಪ್ರಾಥಮಿಕ ವಿಭಾಗದ ಮುಖ್ಯೋಪಾಧ್ಯಾಯಿನಿ ಪ್ರಮೀಳಾ ಡಿಸೋಜಾ ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.

ಶ್ರೀ ವೆಂಕಟರಮಣ ಪದವಿ ಪೂರ್ವ ಕಾಲೇಜಿನ ಹಿಂದಿ ಉಪನ್ಯಾಸಕಿ ಸುಖಿತಾ ಸುವರ್ಣ ಸ್ವಾಗತಿಸಿದರು. ಕನ್ನಡ ಉಪನ್ಯಾಸಕಿ ಸುನೀತಾ ಶೆಟ್ಟಿ ನಿರೂಪಿಸಿದರು.