ಡ್ರಗ್ಸ್ ಬಗ್ಗೆ ಮಾಹಿತಿ ನೀಡಿ ಸೂಕ್ತ ಬಹುಮಾನ ಪಡೆಯಿರಿ: ಮಣಿಪಾಲ ಪೊಲೀಸರಿಂದ ಬಿಗ್ ಆಫರ್

ಉಡುಪಿ: ಜಿಲ್ಲೆಯಲ್ಲಿ ಡ್ರಗ್ಸ್ ದಂಧೆಗೆ ಸಂಪೂರ್ಣ ಕಡಿವಾಣ ಹಾಕಲು ಜಿಲ್ಲಾ ಪೊಲೀಸರು ಪಣತೊಟ್ಟಿದ್ದಾರೆ. ಆದರೆ ಈ ನಿಟ್ಟಿನಲ್ಲಿ ಮಣಿಪಾಲ ಠಾಣೆಯ ಪೊಲೀಸರು ವಿಭಿನ್ನ ರೀತಿಯಲ್ಲಿ ಕಾರ್ಯಾಚರಣೆ ನಡೆಸಲು ಮುಂದಾಗಿದ್ದಾ, ಡ್ರಗ್ಸ್ ಬಗ್ಗೆ ಮಾಹಿತಿ ನೀಡಿದರೆ ಬಂಪರ್ ಕೊಡುಗೆಯ ಆಫರ್ ಘೋಷಿಸಿದ್ದಾರೆ.

ಮಾದಕ ವಸ್ತು ಮಾರಾಟ ಮತ್ತು ಸೇವನೆ ಆರೋಗ್ಯಕ್ಕೆ ಹಾನಿಕರ, ಅಷ್ಟೇ ಅಲ್ಲ ಇಂದಿನ ಯುವ ಪೀಳಿಗೆ ಇದಕ್ಕೆ ಬಲಿ ಆಗಬಾರದು. ಈ ಹಿನ್ನೆಲೆಯಲ್ಲಿ ಯಾವುದೇ ಪ್ರದೇಶದಲ್ಲಿ ಗಾಂಜಾ ಅಥವಾ ಇನ್ನಿತರ ಮಾದಕ ವಸ್ತು ಮಾರಾಟ, ಸಂಗ್ರಹ ಮತ್ತು ಬಳಕೆ ಕಂಡು ಬಂದರೆ ಸಾರ್ವಜನಿಕರು ಕೂಡಲೇ ನಮಗೆ ತಿಳಿಸಬೇಕು ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.

ಮಾದಕ ವಸ್ತುಗಳನ್ನು ಬಳಕೆ, ಮಾರಾಟ ಮತ್ತು ಸಂಗ್ರಹ ಮಾಡುವವರ ವಿರುದ್ಧ ಸೂಕ್ತ ಕಠಿಣ ಕಾನೂನು ಕ್ರಮ ಕೈಗೊಳ್ಳಲಾಗುವುದು. ಮಾಹಿತಿದಾರರು ಮಾದಕ ವಸ್ತುಗಳಿಗೆ (ಗಾಂಜಾ, ಅಫೀಮು, ಚರಸ್, ಎಲ್.ಎಸ್.ಡಿ.) ಸಂಬಂಧಿಸಿದಂತೆ ಮಾಹಿತಿ ನೀಡಿದರೆ ಅತ್ಯುತ್ತಮ ನಗದು ಬಹುಮಾನ ನೀಡಲಾಗುವುದು. ಮಾಹಿತಿ ನೀಡಿದವರ ವಿವರವನ್ನು ಗೌಪ್ಯವಾಗಿ ಇಡಲಾಗುವುದು.

ಈ ಬಗ್ಗೆ ಮಾಹಿತಿ ಇದ್ದರೆ ಮಣಿಪಾಲ ಪೊಲೀಸ್ ನಿರೀಕ್ಷಕ ಮತ್ತು ಪೊಲೀಸ್ ಉಪ ನಿರೀಕ್ಷಕರಿಗೆ ತಿಳಿಸಬೇಕು. ಮೊಬೈಲ್ ಸಂಖ್ಯೆ 94808 05448 ಮತ್ತು 94808 05475 ಸಂಪರ್ಕಿಸಿ ಮಾಹಿತಿ ನೀಡುವಂತೆ ಮಣಿಪಾಲ ಪೊಲೀಸರು ಸಾರ್ವಜನಿಕರು ಮನವಿ ಮಾಡಿದ್ದಾರೆ.