‘ಗಿರ್‌ಗಿಟ್’ ತುಳು ಚಲನಚಿತ್ರಕ್ಕೆ ಸಿವಿಲ್ ನ್ಯಾಯಾಲಯ ತಡೆಯಾಜ್ಞೆ

ಮಂಗಳೂರು: ಎರಡು ವಾರಗಳ ಹಿಂದೆ ಬಿಡುಗಡೆಗೊಂಡು ಭರ್ಜರಿ ಯಶಸ್ಸಿನೊಂದಿಗೆ ಪ್ರದರ್ಶನ ಕಾಣುತ್ತಿರುವ ‘ಗಿರ್‌ಗಿಟ್’ ತುಳು ಚಲನಚಿತ್ರದ ಪ್ರದರ್ಶನಕ್ಕೆ ಮಂಗಳೂರಿನ ಪ್ರಧಾನ ಸಿವಿಲ್ ನ್ಯಾಯಾಲಯ ತಡೆಯಾಜ್ಞೆ ನೀಡಿದೆ.
ಈ ಚಿತ್ರದಲ್ಲಿ ವಕೀಲರ ಸಮುದಾಯವನ್ನು ಅವಹೇಳನ ಮಾಡಲಾಗಿದೆ. ಜೊತೆಗೆ ನ್ಯಾಯಾಲಯವನ್ನು ನಿಂದನೆ ಮಾಡಲಾಗಿದೆ ಎಂದು ವಕೀಲರ ಸಂಘ ನ್ಯಾಯಾಲಯಕ್ಕೆ ದೂರು ನೀಡಿತ್ತು. ಸಿನಿಮಾದಲ್ಲಿ ನ್ಯಾಯಾಲಯ ಮತ್ತು ವಕೀಲರನ್ನು ತುಚ್ಛವಾಗಿ ಬಿಂಬಿಸಲಾಗಿದ್ದು, ಇದರಿಂದ ನ್ಯಾಯಾಂಗ ಮತ್ತು ವಕೀಲರ ಗೌರವಕ್ಕೆ ಧಕ್ಕೆಯಾಗಿದೆ ಎಂದು ಬಾರ್ ಅಸೋಸಿಯೇಷನ್ ಹೇಳಿದೆ. ರೂಪೇಶ್ ಶೆಟ್ಟಿ ನಾಯಕನಾಗಿ ನಟಿಸಿ, ನಿರ್ದೇಶಿಸಿದ್ದ ಈ ಚಿತ್ರದಲ್ಲಿ ಹಾಸ್ಯನಟ ಅರವಿಂದ ಬೋಳಾರ್ ವಕೀಲನ ಪಾತ್ರದಲ್ಲಿ ಕಾಣಿಸಿಕೊಂಡಿದ್ದರು.
ದಕ್ಷಿಣ ಕನ್ನಡ, ಉಡುಪಿ ಮಾತ್ರವಲ್ಲದೆ ಬೆಂಗಳೂರು, ಶಿವಮೊಗ್ಗ, ವಿದೇಶಗಳಲ್ಲೂ ಈ ಚಿತ್ರ ಪ್ರದರ್ಶನ ಕಾಣುತ್ತಿದೆ‌.