ಉಡುಪಿ ತಲ್ಲೂರು ಫ್ಯಾಮಿಲಿ ಟ್ರಸ್ಟ್, ನವೋದಯ ಸ್ವಸಹಾಯ ಸಂಘ ಹಾಗೂ ಉಡುಪಿ ಗಿರಿಜಾ ಗ್ರೂಫ್ ಆಫ್ ಕಾನ್ಸರ್ನ್ಸ್ ಸಂಯುಕ್ತ ಆಶ್ರಯದಲ್ಲಿ ಮಹಿಳೆಯರಿಗೆ ಉಚಿತ ವೈದ್ಯಕೀಯ ತಪಾಸಣೆ ಶಿಬಿರವನ್ನು ನಗರದ ಪೈ ಸೇಲ್ಸ್ ಹಿಂಬದಿಯ ಮೆಡಿಕಲ್ ಸೆಂಟರ್ ನಲ್ಲಿ ನಡೆಯಿತು.
ಉಡುಪಿ ಪೂರ್ಣಪ್ರಜ್ಞ ಕಾಲೇಜಿನ ನಿವೃತ್ತ ಪ್ರಾಂಶುಪಾಲ ಡಾ.ಬಿ. ಜಗದೀಶ್ ಶೆಟ್ಟಿ ಶಿಬಿರವನ್ನು ಉದ್ಘಾಟಿಸಿ ಶುಭಹಾರೈಸಿದರು. ಪ್ರಸೂತಿ ಮತ್ತು ಸ್ತ್ರೀರೋಗ ತಜ್ಞೆ ಡಾ. ರಂಜಿತಾ ಎಸ್. ನಾಯಕ್ ಅವರು, ಸ್ತ್ರಿ ರೋಗಗಳ ಬಗ್ಗೆ ಮಾಹಿತಿ ನೀಡಿದರು.
ತಾಲ್ಲೂರು ಫ್ಯಾಮಿಲಿ ಟ್ರಸ್ಟ್ ನ ಅಧ್ಯಕ್ಷ ಡಾ. ತಾಲ್ಲೂರು ಶಿವರಾಮ ಶೆಟ್ಟಿ, ನವೋದಯ ಸ್ವಸಹಾಯ ಸಂಘದ ಮೇಲ್ವಿಚಾರಕರಾದ ಚಂದ್ರಿಕಾ ಶೆಟ್ಟಿ, ವಿಮಲ ದಯಾನಂದ್, ಜನಮಿತ್ರ ಡಿಜಿಟಲ್ಸ್ ನ ಧನಂಜಯ್, ಗಿರಿಜಾ ಗ್ರೂಪ್ ಆಫ್ ಕನ್ಸರ್ನ್ಸ್ ನ ರವೀಂದ್ರ ಶೆಟ್ಟಿ ಉಪಸ್ಥಿತರಿದ್ದರು.
ಶಿಬಿರದಲ್ಲಿ ವೈದ್ಯಕೀಯ ತಪಾಸಣೆ, ಔಷಧಿ ಮತ್ತು ಎಲ್ಲಾ ರೀತಿಯ ರಕ್ತದ ಪರೀಕ್ಷೆಯನ್ನು ಸಂಪೂರ್ಣ ಉಚಿತವಾಗಿ ಮಾಡಲಾಯಿತು.
ನೂರಾರು ಜನರು ಭಾಗವಹಿಸಿ ಶಿಬಿರದ ಪ್ರಯೋಜನ ಪಡೆದುಕೊಂಡರು.