ಗಿರಿಜಾ ಹೆಲ್ತ್ ಕೇರ್ & ಸರ್ಜಿಕಲ್: ನಾಳೆ ಉಡುಪಿಯಲ್ಲಿ ಉಚಿತ ಆರೋಗ್ಯ ತಪಾಸಣಾ ಶಿಬಿರ

ಉಡುಪಿ: ಗಿರಿಜಾ ಹೆಲ್ತ್ ಕೇರ್ ಆ್ಯಂಡ್ ಸರ್ಜಿಕಲ್ ನ ಪ್ರಥಮ ವರ್ಷದ ವಾರ್ಷಿಕೋತ್ಸವದ ಪ್ರಯುಕ್ತ ಉಚಿತ ಆರೋಗ್ಯ ತಪಾಸಣಾ ಶಿಬಿರವನ್ನು ಜನವರಿ 12ರಂದು ಬೆಳಿಗ್ಗೆ 9.30ರಿಂದ ಮಧ್ಯಾಹ್ನ 1 ಗಂಟೆಯವರೆಗೆ ಉಡುಪಿ ಮಿತ್ರ ಆಸ್ಪತ್ರೆಯ ಬಳಿಯ ವಾದಿರಾಜ ಕಾಂಪ್ಲೆಕ್ಸ್ ನಲ್ಲಿ ಆಯೋಜಿಸಲಾಗಿದೆ.

ಉಡುಪಿ ಜಿಲ್ಲಾಧಿಕಾರಿ ಜಿ. ಜಗದೀಶ್ ಶಿಬಿರಕ್ಕೆ ಚಾಲನೆ ನೀಡುವರು. ದ.ಕ ಮೊಗವೀರ ಮಹಾಜನ ಸಂಘದ ಅಧ್ಯಕ್ಷ  ಜಯ ಸಿ. ಕೋಟ್ಯಾನ್ ಅಧ್ಯಕ್ಷತೆ ವಹಿಸಲಿದ್ದಾರೆ.

ಈ ಉಚಿತ ಆರೋಗ್ಯ ತಪಾಸಣಾ ಶಿಬಿರದಲ್ಲಿ ಮಧುಮೇಹ ಚಿಕಿತ್ಸೆ (ಶುಗರ್), ರಕ್ತದೊತ್ತಡ( ಬಿ.ಪಿ), ನಾಡಿ ಬಡಿತ ಪರೀಕ್ಷೆ(ಪಲ್ಸ್ ರೇಟ್), ಆಮ್ಲಜನಕ ಶುದ್ಧತ ಮಟ್ಟ (ಆಕ್ಸಿಜನ್ ಸಚ್ಯುರೇಶನ್ ಲೆವೆಲ್) ಪರೀಕ್ಷೆಗಳು ಉಚಿತವಾಗಿ ಮಾಡಲಾಗುವುದು.

ಉಡುಪಿ ಹಾಗೂ ಮಂಗಳೂರು ಜನತೆಗೆ ಸಂಸ್ಥೆಯಿಂದ ಪ್ರತಿ ಭಾನುವಾರ ಉಚಿತ ಆರೋಗ್ಯ ತಪಾಸಣಾ ಶಿಬಿರ ಏರ್ಪಡಿಸಲಾಗುವುದು. ಸಾರ್ವಜನಿಕರು ಈ ಶಿಬಿರದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಇದರ ಪ್ರಯೋಜನ ಪಡೆದುಕೊಳ್ಳಬೇಕು ಎಂದು ಗಿರಿಜಾ ಹೆಲ್ತ್ ಕೇರ್ ಆ್ಯಂಡ್ ಸರ್ಜಿಕಲ್ಸ್ ಸಂಸ್ಥೆ ಪ್ರಕಟಣೆಯಲ್ಲಿ ತಿಳಿಸಿದೆ.