ಜ್ಞಾನಪೀಠ ಪ್ರಶಸ್ತಿ ಪುರಸ್ಕತ ಸಾಹಿತಿ ಗಿರೀಶ್ ಕಾರ್ನಾಡ್ ವಿಧಿವಶ: ಹಿರಿಯ ನಾಟಕಕಾರ ಇನ್ನು ನೆನಪು ಮಾತ್ರ

ಬೆಂಗಳೂರು: ಹಿರಿಯ ಜ್ಞಾನಪೀಠ ಪುರಸ್ಕೃತ ಸಾಹಿತಿ ಗಿರೀಶ್ ಕಾರ್ನಾಡ್ (81) ಸೋಮವಾರ ಬೆಳಗ್ಗೆ ವಿಧಿವಶರಾಗಿದ್ದಾರೆ.
ನಟ ಹಾಗೂ ಸಾಹಿತಿ ಬೆಂಗಳೂರಿನ ಲ್ಯಾವೆಲ್ಲೆ ರಸ್ತೆಯಲ್ಲಿರುವ ತಮ್ಮ ನಿವಾಸದಲ್ಲಿ ಕೊನೆಯುಸಿರೆಳೆದಿದ್ದಾರೆ.
ಹಲವು ದಿನಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದ ಗಿರೀಶ್ ಕಾರ್ನಾಡ್ ಚಿಕಿತ್ಸೆ ಪಡೆಯುತ್ತಿದ್ದರು. ಆದರೆ ಚಿಕಿತ್ಸೆ ಫಲಕಾರಿಯಾಗದೆ ನಿಧನರಾಗಿದ್ದಾರೆ. ಕನ್ನಡಕ್ಕೆ ೭ ನೇ ಜ್ಞಾನಪೀಠ ಪ್ರಶಸ್ತಿ ತಂದು ಕೊಟ್ಟಿದ್ದ ಕಾರ್ನಾಡ್ ಅವರು ಹಯವದನ, ಯಯಾತಿ, ತುಘಲಕ್ ಸೇರಿದಂತೆ ಹಲವು ನಾಟಕಗಳನ್ನು ರಚಿಸಿದ್ದರು. ಭಾರತೀಯ ಚಿತ್ರರಂಗದಲ್ಲಿಯೂ ಉತ್ತಮ ನಟರಾಗಿ ಗುರುತಿಸಿಕೊಂಡಿದ್ದರು. ಶಂಕರ್ ನಾಗ್ ನಿರ್ಧೇಶನದ ಮಾಲ್ಗುಡಿ ಡೇಸ್ ನಲ್ಲಿಯೂ ಮಿಂಚಿದ್ದರು.