ಪರೀಕ್ಷೆಯಲ್ಲಿ 10 ಅಂಕ ಕಡಿಮೆ ಬಂದ ಕಾರಣ ಆತ್ಯಹತ್ಯೆಗೆ ಶರಣಾದ ಬಾಲಕಿ

ಹೆಬ್ರಿ: ಕಡಿಮೆ ಅಂಕ ಬಂದಿದ್ದಕ್ಕೆ ವಿದ್ಯಾರ್ಥಿನಿಯೊಬ್ಬಳು ಆತ್ಮಹತ್ಯೆಗೆ ಶರಣಾದ ಘಟನೆ ಉಡುಪಿ ಜಿಲ್ಲೆಯ ಹೆಬ್ರಿ ತಾಲೂಕು ವ್ಯಾಪ್ತಿಯಲ್ಲಿ ನಡೆದಿದೆ.

ಹೆಬ್ರಿಯ ಎಸ್.ಆರ್ ಪಿಯು ಕಾಲೇಜಿನ ವಿದ್ಯಾರ್ಥಿನಿ ಪೆರ್ಡೂರಿನ ತೃಪ್ತಿ ಆತ್ಮಹತ್ಯೆಗೆ ಶರಣಾದ ವಿದ್ಯಾರ್ಥಿನಿ.

ದುರದೃಷ್ಟದ ಸಂಗತಿಯೆಂದರೆ, ಕೇವಲ 10 ಅಂಕ ಕಡಿಮೆ ಬಂದ ಕಾರಣಕ್ಕಾಗಿ ಈ ವಿದ್ಯಾರ್ಥಿನಿ ಈ ನಿರ್ಧಾರ ತೆಗೆದುಕೊಂಡಿದ್ದಾಳೆ. ಅಂಕ ಕಡಿಮೆ ಬಂದಿದ್ದಕ್ಕೆ ಕಾಲೇಜಿನ ಪ್ರಾಂಶುಪಾಲರು ಈಕೆಗೆ ಮಾನಸಿಕ ಕಿರುಕುಳ ನೀಡುತ್ತಿದ್ದರು ಎಂಬ ಆರೋಪ ಕೇಳಿ ಬಂದಿದೆ. ತೃಪ್ತಿ ಇಲ್ಲಿ ಉಚಿತ ಸೀಟ್ ಪಡೆದುಕೊಂಡಿದ್ದು ಉಚಿತ ಸೀಟ್ ಪಡೆದಿದ್ದ ಮಕ್ಕಳಿಗೆ ಅಂಕ ಕಡಿಮೆ ಬಂದ ಹಿನ್ನೆಲೆಯಲ್ಲಿ ಕಾಲೀಜಿನ ಆಡಳಿತ ಮಂಡಳಿ ಮಾನಸಿಕ ಹಿಂಸೆ ನೀಡುತ್ತಿತ್ತು ಎಂದು ಆಕೆಯ ಸಂಬಂಧಿಕರು ಆರೋಪಿಸಿದ್ದಾರೆ. ಈ ಬಗ್ಗೆ ಹೆಬ್ರಿ ಠಾಣೆಯಲ್ಲಿ ಪಕರಣ ದಾಖಲಾಗಿದೆ.