ಕಾರ್ಕಳ: ಜೋಕಾಲಿ ಆಟದಲ್ಲಿ ನಿರತರಾಗಿದ್ದಾಗ ಕುತ್ತಿಗೆಗೆ ಸೀರೆ ಸುತ್ತಿಕೊಂಡ ಪರಿಣಾಮ ಬಾಲಕಿಯೊಬ್ಬಳು ದಾರುಣ ರೀತಿಯಲ್ಲಿ ಮೃತಪಟ್ಟ ಘಟನೆ ಕಾರ್ಕಳ ತಾಲೂಕು ನಿಟ್ಟೆ ಗ್ರಾಮದ ಕೆಮ್ಮಣ್ಣು ಅಂತೊಟ್ಟು ಎಂಬಲ್ಲಿ ಸಂಭವಿಸಿದೆ
ಅಂತೊಟ್ಟು ನಿವಾಸಿ ಲಕ್ಷ್ಮಣ್ ಪೂಜಾರಿ ಎಂಬವರ ಮಗಳು ಮಾನ್ವಿ (9) ಎಂಬ ಬಾಲಕಿ
ಮೇ 26ರ ಸಂಜೆ ಹೊತ್ತಿಗೆ ಚಿಕ್ಕಪ್ಪ ಉದಯ ಪೂಜಾರಿ ಎಂಬವರ ಮನೆಯ ಬಳಿ ಪಕ್ಕದ್ ಮನೆಯ ದೀಕ್ಷಾ ಎಂಬಾಕೆಯ ಜೊತೆ ಸೀರೆಯನ್ನು ಕಟ್ಟಿ ಜೋಕಾಲಿ ಆಟ ಆಡುವಾಗ ಆಕಸ್ಮಿಕವಾಗಿ ಜೋಕಾಲಿಗೆ ಕಟ್ಟಿದ ಸೀರೆ ಆಕೆಯ ಕುತ್ತಿಗೆಗೆ ಸುತ್ತಿಕೊಂಡಿದ್ದು, ಆಕೆಗೆ ಉಸಿರುಗಟ್ಟಿದೆ. ತತ್ ಕ್ಷಣವೆ ಆಕೆಯನ್ನು ತುರ್ತು ಚಿಕಿತ್ಸೆಗೆಂದು ನಿಟ್ಟೆ ಸಮುದಾಯ ಆರೋಗ್ಯ ಕೇಂದ್ರಕ್ಕೆ ಕರೆದೊಯ್ಯಲಾಗಿತ್ತು. ಮಾನ್ವಿಯ ಆರೋಗ್ಯ ತಪಾಸಣೆ ನಡೆಸಿದ ವೈದ್ಯಾಧಿಕಾರಿಯವರು ಆಕೆ ಅದಾಗಲೇ ಮೃತಪಟ್ಟಿರುವುದಾಗಿ ಖಚಿತ ಪಡಿಸಿದರು.
ಈ ಬಗ್ಗೆ ಕಾರ್ಕಳ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.












