ಬೈಂದೂರು: ಬಟ್ಟೆ ತರಲು ಹೋದ ಯುವತಿ ನಾಪತ್ತೆ

ಉಡುಪಿ: ಬೈಂದೂರು ತಾಲೂಕು ಮುದೂರು ಗ್ರಾಮದ ಹಾರ್ಕಿ ನಿವಾಸಿ ರೇಣುಕಾ (24) ಎಂಬ ಯುವತಿಯು ಮೇ 17 ರಂದು ಸಂಜೆ 4 ಗಂಟೆ ಸುಮಾರಿಗೆ ಮುದೂರು ಪೇಟೆಯಿಂದ ಟೈಲರಿಂಗ್ ಬಟ್ಟೆ ತರಲು ಹೋದವರು ವಾಪಾಸು ಬಾರದೇ ನಾಪತ್ತೆಯಾಗಿರುತ್ತಾರೆ.

5 ಅಡಿ ಎತ್ತರ, ಉರುಟು ಮುಖ, ಬಿಳಿ ಮೈಬಣ್ಣ, ಸಪೂರ ಶರೀರ ಹೊಂದಿದ್ದು, ಕನ್ನಡ ಭಾಷೆ ಮಾತನಾಡುತ್ತಾರೆ. ಈಕೆ ಬಗ್ಗೆ ಮಾಹಿತಿ ದೊರೆತಲ್ಲಿ ಕೊಲ್ಲೂರು ಪೊಲೀಸ್ ಠಾಣೆ ದೂ.ಸಂಖ್ಯೆ: 08254-258233, ಮೊ.ನಂ: 9480805460, ಬೈಂದೂರು ವೃತ್ತ ನಿರೀಕ್ಷಕರ ಕಚೇರಿ ದೂ.ಸಂಖ್ಯೆ: 08254-251031, ಮೊ.ನಂ: 9480805434, ಕಂಟ್ರೋಲ್ ರೂಂ 100, 0820-2526444 ಅನ್ನು ಸಂಪರ್ಕಿಸಬಹುದಾಗಿದೆ  ಎಂದು ಕೊಲ್ಲೂರು ಪೊಲೀಸ್ ಠಾಣೆಯ ಉಪನಿರೀಕ್ಷಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.