ಶ್ರೀಕೃಷ್ಣ ಮಠದಲ್ಲಿ ವೈಭವದ ಗೋಪೂಜೆ

ಉಡುಪಿ: ದೀಪಾವಳಿ ಹಬ್ಬದ ಅಂಗವಾಗಿ ಉಡುಪಿ ಶ್ರೀಕೃಷ್ಣ ಮಠದಲ್ಲಿ ಗೋಪೂಜೆಯನ್ನು ಶ್ರದ್ಧಾಭಕ್ತಿಯಿಂದ ನೆರವೇರಿಸಲಾಯಿತು.

ಪರ್ಯಾಯ ಶೀರೂರು ಮಠದ ಪೀಠಾಧೀಶರಾದ ಶ್ರೀ ವೇದವರ್ಧನತೀರ್ಥ ಶ್ರೀಪಾದರ ಉಪಸ್ಥಿತಿಯಲ್ಲಿ ಗೋವುಗಳನ್ನು ವಿವಿಧ ಹೂವುಗಳಿಂದ ಅಲಂಕರಿಸಿ, ವಿಶೇಷ ನೈವೇದ್ಯ ಸಮರ್ಪಿಸಿ ಪೂಜಿಸಲಾಯಿತು. ಬಳಿಕ ಗೋವುಗಳ ಮೆರವಣಿಗೆ ನಡೆಸಲಾಯಿತು.

ಈ ಸಂದರ್ಭದಲ್ಲಿ ಶ್ರೀಮಠದ ದಿವಾನರು, ಪಾರುಪತ್ಯೆದಾರರು, ಸಿಬ್ಬಂದಿ ವರ್ಗ ಹಾಗೂ ಗೋಪಾಲಕರು ಉಪಸ್ಥಿತರಿದ್ದರು.